Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಬಂದರೆ ಅದಕ್ಕೆ ಮೈತ್ರಿ ಸರ್ಕಾರವೇ ಕಾರಣ-ಶ್ರೀನಿವಾಸ ಪೂಜಾರಿ ಕಿಡಿ

ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಬಂದರೆ ಅದಕ್ಕೆ ಮೈತ್ರಿ ಸರ್ಕಾರವೇ ಕಾರಣ-ಶ್ರೀನಿವಾಸ ಪೂಜಾರಿ ಕಿಡಿ
ಬೆಂಗಳೂರು , ಶನಿವಾರ, 20 ಜುಲೈ 2019 (11:59 IST)
ಬೆಂಗಳೂರು : ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಬಂದರೆ ಅದು ಈ ಸರ್ಕಾರದ ಮೊಂಡುತನದಿಂದಲೇ ಬರಬಹುದು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದ್ದಾರೆ.




ಇಂದು ಯಡಿಯೂರಪ್ಪ ಅವರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಕೇಂದ್ರಕ್ಕೆ ವರದಿ ಕೊಟ್ಟಿದ್ದಾರೆ. ಮೈತ್ರಿ ಪಕ್ಷಗಳು ಸುಪ್ರೀಂಕೋರ್ಟ್ ಗೆ ಹೋದರೂ ಪ್ರಯೋಜನ ಇಲ್ಲ. ಈ ಹಿಂದೆ ರಾಜ್ಯಪಾಲರು ಯಡಿಯೂರಪ್ಪನವರಿಗೆ ಬಹುಮತ ಸಾಬೀತು ಮಾಡಲು ಸಮಯ ಕೊಟ್ಟಿದ್ದರು. ಅಂದು ಯಡಿಯೂರಪ್ಪ ರಾಜ್ಯಪಾಲರು ನಿಗದಿ ಮಾಡಿದ್ದ ಸಮಯದಲ್ಲೇ ನಿಯಮವನ್ನು ಪಾಲಿಸಿದ್ದರು. ಆದರೆ ಈ ಸರ್ಕಾರ ರಾಜ್ಯಪಾಲರ ಸಂದೇಶಗಳನ್ನು ಗೌರವಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಅಲ್ಲದೇ  ಈ ಸರ್ಕಾರಕ್ಕೆ ಬಹುಮತ ಇಲ್ಲ ಅನ್ನೋದು ಸ್ಪಷ್ಟವಾಗಿದೆ. ಸೋಮವಾರ ಈ ಸರ್ಕಾರ ಬಹುಮತ ಕಳೆದುಕೊಳ್ಳುತ್ತದೆ. ಮತ್ತೊಮ್ಮೆ ಚುನಾವಣೆಗೆ ಹೋಗಲು ಯಾರಿಗೂ ಇಷ್ಟ ಇಲ್ಲ. ರಾಜ್ಯದ ರಾಜಕೀಯ ಬಿಕ್ಕಟ್ಟು ನೋಡಿ ರಾಷ್ಟ್ರಪತಿಯವರೇ ಮಧ್ಯ ಪ್ರವೇಶ ಮಾಡಬಹುದು. ರಾಷ್ಟ್ರಪತಿ ಆಡಳಿತ ಬಂದರೆ ಅದು ಈ ಸರ್ಕಾರದ ಮೊಂಡುತನದಿಂದಲೇ ಬರಬಹುದು ಎಂದು  ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರೀ ಮಳೆಯ ಹಿನ್ನಲೆ; ಕೊಡಗು ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ