Select Your Language

Notifications

webdunia
webdunia
webdunia
webdunia

ಸೈಟು ಲಪಟಾಯಿಸಿ ಸ್ವಾಭಿಮಾನಿ ಸಮಾವೇಶ ಮಾಡಿದರೆ ಪಾಪ ಪರಿಹಾರವಾಗುತ್ತಾ?: ಅಶೋಕ ಪ್ರಶ್ನೆ

ಸೈಟು ಲಪಟಾಯಿಸಿ ಸ್ವಾಭಿಮಾನಿ ಸಮಾವೇಶ ಮಾಡಿದರೆ ಪಾಪ ಪರಿಹಾರವಾಗುತ್ತಾ?: ಅಶೋಕ ಪ್ರಶ್ನೆ

Sampriya

ಬೆಂಗಳೂರು , ಬುಧವಾರ, 4 ಡಿಸೆಂಬರ್ 2024 (14:47 IST)
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರಿಗೆ 14 ಬದಲಿ ನಿವೇಶನಗಳನ್ನು ಹಂಚಿಕೆ ಮಾಡುವಲ್ಲಿ ಹಲವು ಅಕ್ರಮಗಳು ನಡೆದಿವೆ ಎಂದು ಜಾರಿ ನಿರ್ದೇಶನಾಲಯವು ಹೇಳಿದೆ.

ಈ ಕುರಿತು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಸಿದ್ದರಾಮಯ್ಯ ವಿರುದ್ಧ ಎಕ್ಸ್‌ನಲ್ಲಿ ವಾಗ್ದಾಳಿ ನಡೆಸಿದ್ದಾರೆ. ಸೈಟ್ ಲಪಟಾಯಿಸಿ ಸ್ವಾಭಿಮಾನಿ ಸಮಾವೇಶ ಮಾಡಿದರೆ ಪಾಪ ಕಳೆದು ಹೋಗುತ್ತದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರ ಪತ್ನಿಯವರಿಗೆ 14 ನಿವೇಶನ ಹಂಚಿಕೆ ಮಾಡುವಲ್ಲಿ ಹಲವು ಅಕ್ರಮಗಳು ನಡೆದಿವೆ ಎಂದು ಇ.ಡಿ. ವರದಿಯಲ್ಲಿ ಬಯಲಾಗಿದ್ದು, ಮೂಡಾ ಪ್ರಕರಣದಲ್ಲಿ ನನ್ನ ಪಾತ್ರವೇ ಇಲ್ಲ ಎನ್ನುತ್ತಿದ್ದ ಮುಖ್ಯಮಂತ್ರಿಗಳು ಈಗ ಅನೇಕ ಪ್ರಶ್ನೆಗಳಿಗೆ ಉತ್ತರಿಸಬೇಕಿದೆ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ, ನಮ್ಮ ದೇಶದಲ್ಲಿ ಕಾನೂನು ಇನ್ನೂ ಗಟ್ಟಿಯಾಗಿದೆ. ತರಾತುರಿಯಲ್ಲಿ ಲೋಕಾಯುಕ್ತ ತನಿಖೆ ಮುಗಿಸಿ ಕ್ಲೀನ್ ಚಿಟ್ ಪಡೆದುಕೊಂಡು ಜನರ ಕಣ್ಣಿಗೆ ಮಣ್ಣೆರೆಚುವ ನಿಮ್ಮ ತಂತ್ರ ಫಲಿಸುವುದಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಸತ್ಯಮೇವ ಜಯತೇ ಎಂದು ಬರೆದುಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಷ್ಟ್ರ ರಾಜಧಾನಿಯ ಗಾಳಿಯ ಗುಣಮಟ್ಟ ಕೊನೆಗೂ ಕೊಂಚ ಸುಧಾರಣೆ: ಈಗ ಎಷ್ಟಿದೆ ಗೊತ್ತಾ