Webdunia - Bharat's app for daily news and videos

Install App

ನಮ್ಮನ್ನು ಗೆಲ್ಲಿಸದಿದ್ರೆ ಅಭಿವೃದ್ಧಿ ಆಗಲ್ಲ: ಸಿಎಂ ಸಿದ್ದರಾಮಯ್ಯ

Webdunia
ಬುಧವಾರ, 5 ಏಪ್ರಿಲ್ 2017 (16:18 IST)
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿರುವುದರಿಂದ ನಮ್ಮನ್ನು ಗೆಲ್ಲಿಸದಿದ್ರೆ ಅಭಿವೃದ್ಧಿ ಆಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಗುಂಡ್ಲುಪೇಟೆ ಉಪಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,  ಸರಕಾರ ರಾಜ್ಯದಲ್ಲಿ ಅಧಿಕಾರದಲ್ಲಿರುವುದರಿಂದ ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತದೆ. ಬೇರೆಯವರು ಗೆದ್ದರೆ ಯಾವುದೇ ಅಭಿವೃದ್ಧಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ.
 
ಗುಂಡ್ಲುಪೇಟೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹಾದೇವ್ ಪ್ರಸಾದ್ ಪದವೀಧರರು ನನಗಿಂತ ಹೆಚ್ಚಿಗೆ ಓದಿದವರು. ಗ್ರಾಮೀಣ ಜೀವನದ ಬಗ್ಗೆ ಹೆಚ್ಚಿನ ತಿಳಿವಳಿಕೆ ಹೊಂದಿದ್ದಾರೆ. ಅಂತಹ ಅಭ್ಯರ್ಥಿಯನ್ನು ಗೆಲ್ಲಿಸಿದಲ್ಲಿ ಕ್ಷೇತ್ರಕ್ಕೆ ಒಳ್ಳೆಯದಾಗುತ್ತದೆ ಎಂದರು.
 
ಇಂತಹ ಅಭ್ಯರ್ಥಿ ಗೆಲ್ಲಬೇಕೋ ಅಥವಾ ಬೇಡವೋ ಎಂದು ನೆರೆದಿದ್ದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿ ಅವರಿಂದಲೇ ಉತ್ತರ ಪಡೆದುಕೊಂಡರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments