Select Your Language

Notifications

webdunia
webdunia
webdunia
webdunia

ಭೀಮಾನಾಯ್ಕ ವಿರುದ್ಧ ಸಾಕ್ಷ್ಯ ಸಿಕ್ಕರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಭೀಮಾನಾಯ್ಕ ವಿರುದ್ಧ ಸಾಕ್ಷ್ಯ ಸಿಕ್ಕರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಗುರುವಾರ, 8 ಡಿಸೆಂಬರ್ 2016 (13:24 IST)
ಬೆಂಗಳೂರಿನ ವಿಶೇಷ ಭೂ ಸ್ವಾಧೀನಾಧಿಕಾರಿ ಭೀಮಾನಾಯ್ಕ ವಿರುದ್ಧ ಸಾಕ್ಷ್ಯ ದೊರೆತಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.
 
ಭೀಮಾನಾಯ್ಕ ಚಾಲಕ ರಮೇಶ್ ಆತ್ಮಹತ್ಯೆಗೆ ಶರಣಾಗುವ ಮುನ್ನ ಪತ್ರವೊಂದನ್ನು ಬರೆದಿದ್ದು, ಅದರಲ್ಲಿ ಭೀಮಾನಾಯ್ಕ ಅವರ ಕರ್ಮಕಾಂಡವನ್ನು ಬಿಚ್ಚಿಟ್ಟಿದ್ದಾನೆ. ಆತನ ಆತ್ಮಹತ್ಯೆಗೆ ಭೀಮಾನಾಯ್ಕ ಕಾರಣವೆಂದು ಪೋಷಕರು ಆರೋಪಿಸಿದ್ದಾರೆ.
 
ರಮೇಶ್ ಸಹೋದರ ಪೊಲೀಸ್ ಠಾಣೆಯಲ್ಲಿ ಭೀಮಾನಾಯ್ಕ ವಿರುದ್ಧ ದೂರು ಸಲ್ಲಿಸಿದ್ದು, ವಿಚಾರಣೆಯಲ್ಲಿ ಭೀಮಾನಾಯ್ಕ ತಪ್ಪೆಸಗಿರುವುದು ಕಂಡು ಬಂದಲ್ಲಿ ಅವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
 
ಯಾವುದೇ ಕಾರಣಕ್ಕೂ ಭ್ರಷ್ಟರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ ಸಿಎಂ ಸಿದ್ದರಾಮಯ್ಯ, ಪೊಲೀಸ್ ತನಿಖೆಯ ನಂತರ ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದು ಹೇಳಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕಪ್ಪು ಹಣ ಪತ್ತೆ ಪ್ರಕರಣ: ಬೆಂಗಳೂರಿನ 10 ಕಡೆ ಎಸಿಬಿ ದಾಳಿ