Webdunia - Bharat's app for daily news and videos

Install App

ವಿ.ಸೋಮಣ್ಣ ಕಾಂಗ್ರೆಸ್ ಸೇರಿದರೆ ಸ್ವಾಗತ: ತನ್ವೀರ್ ಸೇಠ್

Webdunia
ಶನಿವಾರ, 21 ಜನವರಿ 2017 (13:38 IST)
ಬಿಜೆಪಿ ಪಕ್ಷದ ಮಾಜಿ ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಪಕ್ಷ ಸೇರಿದರೆ ಸ್ವಾಗತಿಸುವುದಾಗಿ ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.
 
ಹುಬ್ಬಳ್ಳಿ ನಗರದ ಸರ್ಕ್ಯೂಟ್‌ ಹೌಸ್‌ನಲ್ಲಿ ಸಾರ್ವಜನಿಕರ ಭೇಟಿ ಹಾಗೂ ಶಿಕ್ಷಕರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ರಾಜ್ಯಕಾರಣದಲ್ಲಿ ಯಾವುದು ಅಸಾಧ್ಯವಲ್ಲ. ಬಿಜೆಪಿ ಮಾಜಿ ಸಚಿವ ವಿ. ಸೋಮಣ್ಣ ಅವರು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರುವುದಾದರೆ ಸ್ವಾಗತ ಎಂದರು. 
 
ಚುನಾವಣೆ ಸಂದರ್ಭದಲ್ಲಿ ರಾಜಕೀಯ ಮಾಡುವುದು ಸಹಜ. ಆದರೆ, ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿ ಐಟಿ ದಾಳಿ ನಡೆಸುವುದು ಸರಿಯಲ್ಲ ಎಂದು ಕಿಡಿಕಾರಿದರು. 
 
2017-18 ಸಾಲಿನಲ್ಲಿ ಹೊಸ ಪಠ್ಯ ಕ್ರಮ ಜಾರಿ ಮಾಡಲಾಗುತ್ತದೆ. ಅದರಲ್ಲಿ ಯಾವುದೇ ಕೇಸರಿಕರಣ ಹಾಗೂ ಅಹಿಂದಕರಣ ಮಾಡುವುದಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ಸಚಿವ ತನ್ವೀರ್ ಸ್ಪಷ್ಟಪಡಿಸಿದರು. 
 
ತಾವು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಬರುತ್ತಿದೆ. ಆದರೆ, ಈ ಸುದ್ದಿಗಳು ಸುಳ್ಳು ಎನ್ನಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಮಾಜಿ ಸಚಿವ ವಿ.ಸೋಮಣ್ಣ ಅವರು ಪರೋಕ್ಷವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಇಂಗಿತ ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

RSS ದೇಶದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ, ಇದು ಭಾರತದ ತಾಲಿಬಾನ್: ಬಿಕೆ ಹರಿಪ್ರಸಾದ್

ಸಿದ್ದರಾಮಯ್ಯ ಕಮ್ಯೂನಿಸ್ಟ್‌ಗಳಿಗೆ ರೆಡ್ ಕಾರ್ಪೆಟ್ ಹಾಸಿದ್ದೆ ಇದಕ್ಕೆಲ್ಲ ಕಾರಣ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments