Select Your Language

Notifications

webdunia
webdunia
webdunia
webdunia

ಸಾಲ ಮನ್ನಾ ಮಾಡುವ ಯೋಗ್ಯತೆ ಇಲ್ಲದಿದ್ರೆ ರಾಜೀನಾಮೆ ಕೊಟ್ಟು ಹೋಗಿ: ಕುಮಾರಸ್ವಾಮಿ

ಸಾಲ ಮನ್ನಾ ಮಾಡುವ ಯೋಗ್ಯತೆ ಇಲ್ಲದಿದ್ರೆ ರಾಜೀನಾಮೆ ಕೊಟ್ಟು ಹೋಗಿ: ಕುಮಾರಸ್ವಾಮಿ
ಬೆಂಗಳೂರು , ಮಂಗಳವಾರ, 13 ಜೂನ್ 2017 (15:27 IST)
ಸಾಲ ಮನ್ನಾ ಮಾಡುವ ಯೋಗ್ಯತೆ ಇಲ್ಲದಿದ್ರೆ ರಾಜೀನಾಮೆ ಕೊಟ್ಟು ಹೋಗಲಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಲ ಮನ್ನಾ ಮಾಡುವ ಯೋಗ್ಯತೆ ಇಲ್ಲದಿದ್ರೆ ರಾಜೀನಾಮೆ ಕೊಟ್ಟು ಹೋಗಲಿ. ಕೇಂದ್ರದತ್ತ ಬೊಟ್ಟು ಮಾಡಿ ಸಬೂಬ ಹೇಳುವುದನ್ನು ನಿಲ್ಲಿಸಲಿ ಎಂದು ವಾಗ್ದಾಳಿ ನಡೆಸಿದ್ದಾರೆ.
 
ರೈತರ ಸಾಲ ಮನ್ನಾ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಲಿ. ಅದನ್ನು ಬಿಟ್ಟು ರೈತರೊಂದಿಗೆ ಚೆಲ್ಲಾಟವಾಡುವುದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ರೈತರ ಸಂಕಷ್ಟಗಳನ್ನು ನಿರ್ಲಕ್ಷಿಸಿದಲ್ಲಿ ಮುಂಬರುವ ಚುನಾವಣೆಯಲ್ಲಿ ರೈತರು ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಅಂತರಿಕ್ಷ ತಲುಪಿದ ಮಕ್ಕಳು ಬಿಟ್ಟ ಟೆಡ್ಡಿಬೇರ್