Publish Date: Sat, 09 May 2020 (16:36 IST)
Updated Date: Sat, 09 May 2020 (16:37 IST)
ಕೋವಿಡ್ – 19 ವೈರಸ್ ಪೀಡಿತರ ಸಂಪರ್ಕಕ್ಕೆ ನೀವು ಬಂದರೆ ಹೀಗೆ ಮಾಡಲೇಬೇಕು.
ಕೋವಿಡ್-19 ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳು ಸ್ವಯಂ ಪ್ರೇರಣೆಯಿಂದ ಮುಂದೆ ಬಂದು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು.
ಹೀಗಂತ ಉತ್ತರಕನ್ನಡ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಕೆ ಮನವಿ ಮಾಡಿದ್ದಾರೆ. ಭಟ್ಕಳದಲ್ಲಿ ಶನಿವಾರ ಏಳು ಹೊಸ ಸೋಂಕಿನ ಪ್ರಕರಣಗಳು ದೃಢಪಟ್ಟಿದೆ. ಜಿಲ್ಲೆಯಲ್ಲಿ ಒಟ್ಟಾರೆ 20 ಸಕ್ರಿಯ ಸೋಂಕು ಪ್ರಕರಣಗಳಿವೆ. ಈಗಾಗಲೇ 11 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದರು.
ಸೋಂಕಿನ ಗುಣಲಕ್ಷಣಗಳನ್ನು ಹೊಂದಿರುವಂಥವರು ಯಾವುದೇ ಕಾರಣಕ್ಕೂ ಸ್ವಯಂ ಚಿಕಿತ್ಸೆ ಮಾಡಿಕೊಳ್ಳದೇ ಸ್ಥಳೀಯ ಆಡಳಿತಕ್ಕೆ ಮಾಹಿತಿ ನೀಡಬೇಕು. ಒಂದೊಮ್ಮೆ ಮಾಹಿತಿಯನ್ನು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟರೇ ಅಂಥವರ ಮೇಲೆ ಯಾವುದೇ ಮುಲಾಜಿಲ್ಲದೇ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.