Select Your Language

Notifications

webdunia
webdunia
webdunia
webdunia

ಚುನಾವಣೆಯಲ್ಲಿ ಒಳ್ಳೆಯವರು ಕಾಣದಿದ್ರೆ ನೋಟಾಗೆ ಒತ್ತಿ : ಕಾಗೇರಿ

ಚುನಾವಣೆಯಲ್ಲಿ ಒಳ್ಳೆಯವರು ಕಾಣದಿದ್ರೆ ನೋಟಾಗೆ ಒತ್ತಿ : ಕಾಗೇರಿ
ಕಲಬುರಗಿ , ಗುರುವಾರ, 1 ಡಿಸೆಂಬರ್ 2022 (12:58 IST)
ಕಲಬುರಗಿ : ಚುನಾವಣೆಗೆ ನಿಂತವರಲ್ಲಿ ಯಾರೂ ಒಳ್ಳೆಯವರು ಕಾಣದಿದ್ದರೆ ನೋಟಾಗೆ ಒತ್ತಿ ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಕರೆ ನೀಡಿದ್ದಾರೆ.

ಬುಧವಾರ ನಗರದ ಡಾ.ಎಸ್.ಎಂ ಪಂಡಿತ್ ರಂಗಮಂದಿರದಲ್ಲಿ ಕಲಬುರಗಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ `ಚುನಾವಣೆ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ’ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ್ದಾರೆ.

ಈ ವೇಳೆ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ `ನನ್ನ ಮತ ಮಾರಾಟಕ್ಕಿಲ್ಲ’ ಎಂಬ ಆತ್ಮಸಾಕ್ಷಿಯ ಅಭಿಯಾನ ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ.

ಚುನಾವಣೆಯಲ್ಲಿಂದು ಹಣ, ತೋಳ್ಬಲ ಹಾಗೂ ಜಾತಿ ಬಲ ಪ್ರಮುಖ ಪಾತ್ರ ವಹಿಸುತ್ತಿವೆ. ಸಂವಿಧಾನ ಬದ್ಧವಾಗಿ ಸಿಕ್ಕಿರುವ ಮತದಾನದ ಹಕ್ಕನ್ನು ಮತದಾರರು ಅರಿಯಬೇಕು.

ಮತ ಮಾರಾಟ ಮಾಡದೇ ಸ್ಫರ್ಧಾಳುಗಳಲ್ಲಿ ಉತ್ತಮರನ್ನು ಆಯ್ಕೆ ಮಾಡಿ. ಒಂದು ವೇಳೆ ಚುನಾವಣೆ ನಿಂತವರಲ್ಲಿ ಯಾರೂ ಒಳ್ಳೆಯವರು ಕಾಣದಿದ್ದರೆ ನೋಟಾಗೆ ಒತ್ತಿ ಎಂದು ಹೇಳಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಫಸ್ಟ್ ಟೈಮ್ ಎಸ್‍ಪಿ ರೋಡ್ ಬಂದ್?