Select Your Language

Notifications

webdunia
webdunia
webdunia
webdunia

ಧೈರ್ಯವಿದ್ದರೆ ಮಸೀದಿ ಹೋಗಿ ಮುಸ್ಲಿಮರದ್ದಲ್ಲ ಎಂದು ಹೇಳಲಿ: ಆರ್‌ ಅಶೋಕ್

ವಿರೋಧ ಪಕ್ಷದ ನಾಯಕ ಆರ್ ಅಶೋಕ್

Sampriya

ಮೈಸೂರು , ಭಾನುವಾರ, 31 ಆಗಸ್ಟ್ 2025 (16:45 IST)
ಮೈಸೂರು: ಚಾಮುಂಡೇಶ್ವರಿ ದೇವಾಲಯದ ಪಾವಿತ್ರ‍್ಯತೆಗೆ ಧಕ್ಕೆಯಾದಲ್ಲಿ ಧರ್ಮಸ್ಥಳ ಚಲೋ ಮಾದರಿಯಲ್ಲೇ ಚಾಮುಂಡೇಶ್ವರಿ ಚಲೋ ಹೋರಾಟ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್ ಎಚ್ಚರಿಕೆ ನೀಡಿದರು. 

ಚಾಮುಂಡಿ ದೇವಸ್ಥಾನದಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಚಾಮುಂಡೇಶ್ವರಿ ತಾಯಿ ಕಾಂಗ್ರೆಸ್ ಸರ್ಕಾರಕ್ಕೆ ಒಳ್ಳೆಯ ಬುದ್ದಿಯನ್ನು ನೀಡಲಿ. ಅವರಲ್ಲಿನ ಹಿಂದೂ ಶ್ರದ್ಧಾ ಕೇಂದ್ರಗಳನ್ನು ಟಾರ್ಗೆಟ್ ಮಾಡುವ ಮನಸ್ಥಿತಿಯನ್ನು ದೂರ ಮಾಡಲಿ ಎಂದು ತಾಯಿಯಲ್ಲಿ ಪ್ರಾರ್ಥಿಸಿದ್ದೇನೆ. 

ಮೈಸೂರಿನ ಒಡೆಯರ್ ರಾಜವಂಶಸ್ಥರು ನೂರಾರು ವರ್ಷಗಳಿಂದಲೂ ದಸರಾ ಆಚರಿಸಿಕೊಂಡು ಬಂದಿದ್ದಾರೆ. ಇಂತಹ ಪವಿತ್ರವಾದ ಹಬ್ಬವನ್ನು ಕಾಂಗ್ರೆಸ್ ಸರ್ಕಾರ ಅಪವಿತ್ರ ಮಾಡಬಾರದು. ಇದು ಹಿಂದೂಗಳ ದೇವಾಲಯ ಅಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಅಂದಮೇಲೆ ಇದು ಯಾರದ್ದು? ಇವರಿಗೆ ಧೈರ್ಯವಿದ್ದರೆ ಮಸೀದಿ ಮುಂದೆ ಹೋಗಿ ಇದು ಮುಸ್ಲಿಮರದ್ದಲ್ಲ ಎಂದು ಹೇಳಲಿ ಎಂದು ಸವಾಲೆಸೆದರು.

ಶಬರಿಮಲೆ ಅಯ್ಯಪ್ಪ, ತಿರುಪತಿ ನಂತರ ಧರ್ಮಸ್ಥಳ ಹಾಗೂ ಚಾಮುಂಡೇಶ್ವರಿ ದೇವಾಲಯಗಳನ್ನು ಗುರಿ ಮಾಡಲಾಗಿದೆ ಎಂದು ದೂರಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಧರ್ಮಸ್ಥಳದಲ್ಲಿ ಇಂತಹ ಕುಟುಂಬದಲ್ಲಿ ಹುಟ್ಟಿ ಬೆಳೆದಿರುವುದು ಪುಣ್ಯ: ವೀರೇಂದ್ರ ಹೆಗ್ಗಡೆ