Webdunia - Bharat's app for daily news and videos

Install App

ಧೈರ್ಯವಿದ್ದರೆ ಮಸೀದಿ ಹೋಗಿ ಮುಸ್ಲಿಮರದ್ದಲ್ಲ ಎಂದು ಹೇಳಲಿ: ಆರ್‌ ಅಶೋಕ್

Sampriya
ಭಾನುವಾರ, 31 ಆಗಸ್ಟ್ 2025 (16:45 IST)
ಮೈಸೂರು: ಚಾಮುಂಡೇಶ್ವರಿ ದೇವಾಲಯದ ಪಾವಿತ್ರ‍್ಯತೆಗೆ ಧಕ್ಕೆಯಾದಲ್ಲಿ ಧರ್ಮಸ್ಥಳ ಚಲೋ ಮಾದರಿಯಲ್ಲೇ ಚಾಮುಂಡೇಶ್ವರಿ ಚಲೋ ಹೋರಾಟ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್ ಎಚ್ಚರಿಕೆ ನೀಡಿದರು. 

ಚಾಮುಂಡಿ ದೇವಸ್ಥಾನದಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಚಾಮುಂಡೇಶ್ವರಿ ತಾಯಿ ಕಾಂಗ್ರೆಸ್ ಸರ್ಕಾರಕ್ಕೆ ಒಳ್ಳೆಯ ಬುದ್ದಿಯನ್ನು ನೀಡಲಿ. ಅವರಲ್ಲಿನ ಹಿಂದೂ ಶ್ರದ್ಧಾ ಕೇಂದ್ರಗಳನ್ನು ಟಾರ್ಗೆಟ್ ಮಾಡುವ ಮನಸ್ಥಿತಿಯನ್ನು ದೂರ ಮಾಡಲಿ ಎಂದು ತಾಯಿಯಲ್ಲಿ ಪ್ರಾರ್ಥಿಸಿದ್ದೇನೆ. 

ಮೈಸೂರಿನ ಒಡೆಯರ್ ರಾಜವಂಶಸ್ಥರು ನೂರಾರು ವರ್ಷಗಳಿಂದಲೂ ದಸರಾ ಆಚರಿಸಿಕೊಂಡು ಬಂದಿದ್ದಾರೆ. ಇಂತಹ ಪವಿತ್ರವಾದ ಹಬ್ಬವನ್ನು ಕಾಂಗ್ರೆಸ್ ಸರ್ಕಾರ ಅಪವಿತ್ರ ಮಾಡಬಾರದು. ಇದು ಹಿಂದೂಗಳ ದೇವಾಲಯ ಅಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಅಂದಮೇಲೆ ಇದು ಯಾರದ್ದು? ಇವರಿಗೆ ಧೈರ್ಯವಿದ್ದರೆ ಮಸೀದಿ ಮುಂದೆ ಹೋಗಿ ಇದು ಮುಸ್ಲಿಮರದ್ದಲ್ಲ ಎಂದು ಹೇಳಲಿ ಎಂದು ಸವಾಲೆಸೆದರು.

ಶಬರಿಮಲೆ ಅಯ್ಯಪ್ಪ, ತಿರುಪತಿ ನಂತರ ಧರ್ಮಸ್ಥಳ ಹಾಗೂ ಚಾಮುಂಡೇಶ್ವರಿ ದೇವಾಲಯಗಳನ್ನು ಗುರಿ ಮಾಡಲಾಗಿದೆ ಎಂದು ದೂರಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2017ರಲ್ಲಿ ಪೊಲೀಸ್ ಅಧಿಕಾರಿಯ ಕೊಲೆ ಯತ್ನ ಪ್ರಕರಣ: ಬಂಧಿತ ಆರೋಪಿ ಕೊನೆಗೂ ಅರೆಸ್ಟ್‌

ಬೆಂಗಳೂರಿನ ಶಿವಾಜಿನಗರ ಮೆಟ್ರೊ ನಿಲ್ದಾಣಕ್ಕೆ ಸೇಂಟ್ ಮೇರಿ ಹೆಸರು: ಮುಂಬೈನಲ್ಲಿ ಗುಡುಗಿದ ಫಡಣವೀಸ್‌

ಮದ್ದೂರಿನಲ್ಲಿ ಭಾಷಣ ಮಾಡಿದ ಬಿಜೆಪಿ ನಾಯಕ ಸಿಟಿ ರವಿ ಮೇಲೆ ಬಿತ್ತು ಕೇಸ್

ವಿಪತ್ತು ಪೀಡಿತ ಪ್ರದೇಶಗಳ ಸಮೀಕ್ಷೆಗೆ ಉತ್ತರಾಖಂಡಕ್ಕೆ ಬಂದಿಳಿದ ಪ್ರಧಾನಿ

ಜಮ್ಮು ಕಾಶ್ಮೀರದ ದೋಡಾದಲ್ಲಿ ಭಾರೀ ಸ್ಫೋಟ, ಇಬ್ಬರು ವಶಕ್ಕೆ

ಮುಂದಿನ ಸುದ್ದಿ
Show comments