Select Your Language

Notifications

webdunia
webdunia
webdunia
webdunia

ಬಾಯಿ ತೆಗೆದರೆ ಸುಳ್ಳು ಹೇಳುವ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ: ಲಕ್ಷ್ಮಿ ಹೆಬ್ಬಾಳಕರ ವ್ಯಂಗ್ಯ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Sampriya

ಉಡುಪಿ , ಶುಕ್ರವಾರ, 20 ಜೂನ್ 2025 (15:03 IST)
ಉಡುಪಿ: ಬಾಯಿ ತೆರೆದರೆ ರಾಮಾಯಣ, ಭಗವದ್ಗೀತೆ, ಮಹಾಭಾರತ ಎಂದು ಹೇಳುವ ಚಕ್ರವರ್ತಿ ಸೂಲಿಬೆಲೆ, ಸುಳ್ಳಿನ ಚಕ್ರವರ್ತಿ. ಅವರು ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ ಎನ್ನುವುದು ಇಡೀ ರಾಜ್ಯಕ್ಕೆ ಗೊತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

ಅವರು ಕುಂದಾಪುರದಲ್ಲಿ ಹಮ್ಮಿಕೊಂಡಿರುವ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ ಕಾರ್ಯಕ್ರಮದ ಆಯೋಜಕರಿಗೆ ಪೊಲೀಸರು ನೋಟಿಸ್‌ ಸಂಬಂಧ ಪ್ರತಿಕ್ರಿಯಿಸಿದ ಅವರು ಅವರು ಕಪ್ಪಗಿರುವುದನ್ನು ಬೆಳ್ಳಗೆ ಮಾಡುವುದರಲ್ಲಿ, ಬೆಳ್ಳಗೆ ಇರುವುದನ್ನು ಕಪ್ಪು ಮಾಡುವುದರಲ್ಲಿ ಸೂಲಿಬೆಲೆ ನಿಸ್ಸೀಮರು ಎಂದರು.

ನಾವು ಸೂಲಿಬೆಲೆಯಿಂದ ಪಾಠ ಕೇಳಬೇಕಾಗಿಲ್ಲ. ಅವರು ಮೂರು ದಿನ ಉಡುಪಿ ಜಿಲ್ಲೆಯಲ್ಲಿ ಇರುವ ವಿಚಾರ ಪೊಲೀಸ್ ವರಿಷ್ಠಾಧಿಕಾರಿಗಳಿಂದ ತಿಳಿಯಿತು. ಖಂಡಿತವಾಗಿ ಅವರು ತಮ್ಮ ಪ್ರವಾಸ ಮಾಡಬಹುದು. ಆದರೆ ದ್ವೇಷ ಭಾಷಣ, ಸುಳ್ಳು ಬಿತ್ತುವ ಕೆಲಸ, ವಿಷ ಬೀಜ ಬಿತ್ತುವ ಕೆಲಸ ಮಾಡದಿರಲಿ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಆದ್ರೂ ಬಿಟ್ಟಿ ಪ್ರಚಾರ: ಯಡಿಯೂರಪ್ಪ