Select Your Language

Notifications

webdunia
webdunia
webdunia
webdunia

ವೋಟು ಹಾಕದೇ ಮನೆಯಲ್ಲಿಯೇ ಕುಳಿತರೆ ಬಿಜೆಪಿಗೆ ಲಾಭ : ಜಮೀರ್

ಬಿಜೆಪಿ
ಬಾಗಲಕೋಟೆ : ನೀವು ವೋಟು ಹಾಕದೇ ಮನೆಯಲ್ಲಿಯೇ ಕುಳಿತರೆ ಬಿಜೆಪಿಗೆ ಲಾಭವಾಗುತ್ತದೆ. ಆದ್ದರಿಂದ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಓಟು ಹಾಕಬೇಕು ಎಂದು ಮಾಜಿ ಸಚಿವ, ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಮುಸ್ಲಿಮರಲ್ಲಿ ಮನವಿ ಮಾಡಿದರು.
 
ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದ ಅನ್ನಭಾಗ್ಯದ ಮಹತ್ವ ಕೊರೊನಾ ವೇಳೆ ಎಲ್ಲರಿಗೂ ಗೊತ್ತಾಯಿತು.

ನನ್ನ ಕ್ಷೇತ್ರದ ಸ್ಲಮ್ಗಳ ಜನರು ದೇವರ ಮನೆಯಲ್ಲಿ ಸಿದ್ದರಾಮಯ್ಯ ಅವರ ಫೋಟೋ ಇಟ್ಟುಕೊಂಡಿದ್ದರು ಎಂದು ಹೇಳಿದರು. 

ಬಿಜೆಪಿ ಆಡಳಿತದಲ್ಲಿ ಅಡುಗೆ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ಅದೇ ನಮ್ಮ ಸರ್ಕಾರ ಆಡಳಿತಕ್ಕೆ ಬಂದರೆ ಮನೆಯ ಒಡತಿಗೆ ವರ್ಷಕ್ಕೆ 24 ಸಾವಿರ ರೂ. ಕೊಡುತ್ತೇವೆ. ಕಾಂಗ್ರೆಸ್ ಸರ್ಕಾರ ಯಾವಾಗ ಆಡಳಿತಕ್ಕೆ ಬಂದಿದೆಯೋ ಆಗ ಜನರಿಗೆ ಒಳ್ಳೆಯದಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ : ಸದ್ಯಕ್ಕೆ ಟೋಲ್ ಸಂಗ್ರಹ ಇಲ್ಲ?