Select Your Language

Notifications

webdunia
webdunia
webdunia
webdunia

ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ: ಡಿಕೆಶಿಗೆ ಪರೋಕ್ಷವಾಗಿ ಕುಮಾರಸ್ವಾಮಿ ಕೌಂಟರ್‌

Honey Trap Case, DCM DK Shivkumar, Central Minister HD Kumaraswamy

Sampriya

ಬೆಂಗಳೂರು , ಗುರುವಾರ, 20 ಮಾರ್ಚ್ 2025 (20:11 IST)
ಬೆಂಗಳೂರು:  ಭೂ ಒತ್ತುವರಿ ಪ್ರಕರಣದಲ್ಲಿ ಯಾವುದೇ ಸೇಡಿನ ರಾಜಕೀಯ ಇಲ್ಲ. ಸರ್ಕಾರಿ ಅಧಿಕಾರಿಗಳು ನ್ಯಾಯಾಲಯದ ಆದೇಶಗಳನ್ನು ಪಾಲಿಸಿದ್ದಾರೆ ಎಂದು ಡಿಕೆ ಶಿವಕುಮಾರ್‌ ಹೇಳಿಕೆ ನೀಡಿದ ಬೆನ್ನಲ್ಲೇ ಎಚ್‌ ಡಿ ಕುಮಾರಸ್ವಾಮಿ ಕೌಂಟರ್‌ ನೀಡಿದ್ದಾರೆ.

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ಪೋಸ್ಟ್‌ನಲ್ಲಿ ಬರೆದು  ಡಿಕೆಶಿಗೆ ಪರೋಕ್ಷವಾಗಿ ಕೌಂಟರ್ ನೀಡಿದ್ದಾರೆ.

ಎಚ್‌ಡಿ ಕುಮಾರಸ್ವಾಮಿ ಪೋಸ್ಟ್‌ನಲ್ಲಿ ಹೀಗಿದೆ:

ಮರ್ಯಾದೆಗೇಡಿ, ಕಿಡಿಗೇಡಿ ನನ್ನ ಮೇಲೆ ಮತ್ತೆ ವಿಷ ಕಕ್ಕಿರುವುದು ಹತಾಶೆ ಅಷ್ಟೇ. ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ..! ಇಷ್ಟೂ ಸಾಮಾನ್ಯಜ್ಞಾನವೂ ಇಲ್ಲವೇ? ಕುಂಬಳಕಾಯಿ ಕಳ್ಳನಿಗೆ ಕೋಪ ಬಂದಿದೆ!


ಅಹೋರಾತ್ರಿಯೂ ದ್ರೋಹ ಚಿಂತನೆ, ವಿಶ್ವಾಸದ್ರೋಹ, ಉಂಡ ಮನೆಗೆ ಕನ್ನ, ಸ್ವಪಕ್ಷೀಯರಿಗೇ ಗುನ್ನ.. ಇದೂ ಒಂದು ಬದುಕೇ..? ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಕ್ರಿಮಿನಲ್ ಕೃತ್ಯಗಳಲ್ಲಿ ತೊಡಗಿರುವ ವಿಷಸರ್ಪ ನನ್ನಡೆಗೆ ನಾಲಿಗೆ ಚಾಚಿದೆ! ಇಂಥ ಕ್ರಿಮಿನಲ್ ಒಬ್ಬ ಕೆಟ್ಟ ಅಲೋಚನೆಗಳಲ್ಲಿ ದಿನಪೂರ್ತಿ ಮುಳುಗಿರುವುದು ಸಹಜ. ಕ್ರಿಮಿನಲ್'ನ ಚಾಳಿಯೇ ಧಮ್ಕಿ ಹಾಕುವುದು. ವಿಷಕ್ರಿಮಿಯ ಕೆಲಸ ಎಲ್ಲರನ್ನೂ ಕಚ್ಚುವುದು.. ಇದರಲ್ಲಿ ನನಗೇನೂ ಅಚ್ಚರಿ ಇಲ್ಲ.

ನಾನು ಭೂ ಒತ್ತುವರಿ ಮಾಡಿದ್ದೇನೋ ಇಲ್ಲವೋ ಕಾನೂನು ವ್ಯಾಪ್ತಿಯಲ್ಲಿ ತೀರ್ಮಾನವಾಗುತ್ತದೆ. ಈಗ ನನ್ನ ಮರ್ಯಾದೆ ವಿಷಯ ಇರಲಿ, ಇವತ್ತು ಸ್ವಪಕ್ಷೀಯರೇ ಈ ಮರ್ಯಾದೆಗೇಡಿಯ ಮಾನವನ್ನು ವಿಧಾನಸೌಧದಲ್ಲಿಯೇ ಹರಾಜು ಹಾಕಿದ್ದಾರೆ! ಅದಕ್ಕೆ ಉತ್ತರವೇನು

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯರ ಬಣದವರೇ ಹನಿಟ್ರ್ಯಾಪ್ ಬಗ್ಗೆ ದನಿ ಎತ್ತಿದವರು, ಇದು ಕಾಕತಾಳಿಯವೋ, ರಾಜಕೀಯ ಷಡ್ಯಂತ್ರವೋ