Publish Date: Sun, 02 Jul 2017 (11:40 IST)
Updated Date: Sun, 02 Jul 2017 (11:43 IST)
ಉಡುಪಿ ಶ್ರೀಕೃಷ್ಣಮಠದಲ್ಲಿ ಮುಸ್ಲಿಮರಿಗೆ ಇಫ್ತಾರ್ ಕೂಟ ಆಯೋಜಿಸಿರುವುದನ್ನು ವಿರೋಧಿಸಿ ಪ್ರಮೋದ್ ಮುತಾಲಿಕ್ ನೇತೃತ್ವದ ಶ್ರೀ ರಾಮಸೇನೆ ರಾಜ್ಯದಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.
ಉಡುಪಿ ಶ್ರೀಕೃಷ್ಣಮಠದಲ್ಲಿ ಪೇಜಾವರ್ ಶ್ರೀಗಳು ಮುಸ್ಲಿಂ ಸಮುದಾಯಕ್ಕೆ ಇಫ್ತಾರ್ ಕೂಟ ಆಯೋಜಿಸಿರುವುದು ಶ್ರೀರಾಮಸೇನೆ ಸೇರಿದಂತೆ ಕೆಲ ಹಿಂದು ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.
ಉಡುಪಿ ನಗರದ ಬಸ್ ನಿಲ್ದಾಣ ಬಳಿ ಶ್ರೀರಾಮಸೇನೆ ಕಾರ್ಯಕರ್ತರು ಭಜನೆ ಮಾಡುವ ಮೂಲಕ ಪ್ರತಿಭಟನೆ ತೋರಿದ್ದಾರೆ. ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ಕೂಡಾ ಶ್ರೀರಾಮಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.