Select Your Language

Notifications

webdunia
webdunia
webdunia
webdunia

ಮುಸ್ಲಿಮರು ಒಪ್ಪಿದ್ರೆ ಮಾತ್ರ ಇಫ್ಟಾರ್‌ಕೂಟ: ಪೇಜಾವರ ಶ್ರೀ

ಮುಸ್ಲಿಮರು ಒಪ್ಪಿದ್ರೆ ಮಾತ್ರ ಇಫ್ಟಾರ್‌ಕೂಟ: ಪೇಜಾವರ ಶ್ರೀ
ಉಡುಪಿ , ಶುಕ್ರವಾರ, 1 ಜೂನ್ 2018 (19:54 IST)
ಈ ಬಾರಿಯೂ ಇಫ್ತಾರ್ ಕೂಟ ಮಾಡಬೇಕೆಂಬ ಭಾವನೆ ಇದೆ. ಮುಸಲ್ಮಾನ ನಾಯಕರು, ಪ್ರಮುಖರು ಒಪ್ಪಿದರೆ ಸತ್ಕಾರ ಕೂಟ ಮಾಡುತ್ತೇನೆ. ಈ ಬಾರಿ ಮುಸ್ಲೀಮರು ಇಫ್ತಾರ್ ಕೂಟಕ್ಕೆ ಬಹಳ ಉತ್ಸಾಹ ತೋರಿಸುತ್ತಿಲ್ಲ ಎಂದು ಪೇಜಾವರ ಶ್ರೀ ಹೇಳಿದ್ದಾರೆ. 
ಕಳೆದ ಬಾರಿಯ ಇಫ್ತಾರ್ ಕೂಟ ಬಹಳ ಚರ್ಚೆಯಾಗಿತ್ತು. ಮೂರ್ತಿ ಇರುವಲ್ಲಿ ಕಾರ್ಯಕ್ರಮ ಆಯೋಜಿಸಲು ಮುಸಲ್ಮಾನರು ಒಪ್ಪುತ್ತಿಲ್ಲ. ಗೋವಿಂದ ಕಲ್ಯಾಣ ಮಂಟಪದಲ್ಲಿ ಸತ್ಕಾರ ಕೂಟ ಆಯೋಜಿಸುವ ಆಲೋಚನೆಯಿದೆ ಎಂದು ತಿಳಿಸಿದ್ದಾರೆ. 
 
ಅಲ್ಪಸಂಖ್ಯಾತರನ್ನು ಬಹು ಸಂಖ್ಯಾತರನ್ನು ಸಮಾನವಾಗಿ ಕಾಣಬೇಕು. ಸಂವಿಧಾನ ಬದಲಿಸಿ ಅಂತ ನಾನು ಯಾವತ್ತೂ ಹೇಳಿಲ್ಲ. 
ದೇಶದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ದೇಶದಲ್ಲಿ ಎಲ್ಲರಿಗೂ ಒಂದೇ ನ್ಯಾಯ ಇರಬೇಕು ಎನ್ನುವುದೇ ನಮ್ಮ ಬಯಕೆಯಾಗಿದೆ ಎಂದರು. 
 
ಶಿಕ್ಷಣ, ಆಹಾರ, ಸರ್ಕಾರದ ಯೋಜನೆ ಎಲ್ಲಾ ಧರ್ಮದ ಬಡವರಿಗೆ ಸಿಗಬೇಕು. ನಾನು ಅಂಬೇಡ್ಕರ್ ವಿರೋಧಿಯಲ್ಲ. ಎಲ್ಲಾ ಧರ್ಮ, ಜಾತಿಯವರೊಂದಿಗೆ ನಾನು ಚೆನ್ನಾಗಿದ್ದೇನೆ ಎಂದು ಉಡುಪಿಯಲ್ಲಿ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಡಿಕೆ ಬ್ರದರ್ಸ್ ಮತ್ತು ಬೆಂಬಲಿಗರ ಮನೆಗಳ ಮೇಲೆ ಐಟಿ ದಾಳಿ ಖಂಡಿಸಿ ಪ್ರತಿಭಟನೆ