ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ಬದಲಾವಣೆಗಳಾಗಬಹುದು ಎಂದು ಸಚಿವ ಕೆ.ಎನ್.ರಾಜಣ್ಣ ಅವರು ಮಾಡಿರುವ ಹೇಳಿಕೆಯನ್ನು ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ತಳ್ಳಿಹಾಕಿದ್ದಾರೆ.
ಈ ರೀತಿಯ ಹೇಳಿಕೆಗಳನ್ನು ನಿರ್ಲಕ್ಷಿಸಬೇಕು ಎಂದರು.
ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಅಂಗವಾಗಿ ಕರ್ನಾಟಕ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು ರಾಜಣ್ಣ ಹೇಳಿಕೆಯನ್ನು ತಳ್ಳಿಹಾಕಿದರು. ಅದಲ್ಲದೆ ಈ ರೀತಿಯ ಹೇಳಿಕೆಯನ್ನು ನಿರ್ಲಕ್ಷಿಸಿ ಎಂದರು.