Publish Date: Tue, 26 Sep 2023 (18:17 IST)
Updated Date: Tue, 26 Sep 2023 (17:22 IST)
ಅಕ್ರಮ ಗೋಮಾಂಸ ಸಾಗಾಣಿಕೆ ಪ್ರಕರಣ ಸಂಬಂಧ ದೇವನಹಳ್ಳಿಯಲ್ಲಿ 23 ಮಂದಿ ಮೇಲೆ ಪೋಲಿಸರು ಪ್ರಕರಣ ದಾಖಲಿಸಿದ್ದಾರೆ. ಅಕ್ರಮ ಗೋಮಾಂಸ ಸಾಗಾಣಿಕೆ ಮಾಡಿದ್ದ 7 ಮಂದಿ ಮೇಲೆ ಕೇಸ್ ದಾಖಲಾಗಿದೆ.
ಗೋಮಾಂಸ ಸಾಗಾಣಿಕೆ ಮಾಡುತ್ತಿದ್ದ 5 ವಾಹನಗಳನ್ನ ಪೋಲಿಸರು ವಶಕ್ಕೆ ಪಡೆದಿದ್ದಾರೆ. ನೈತಿಕ ಪೊಲೀಸ್ ಗಿರಿ ಮಾಡಿದ್ದ 16 ಮಂದಿ ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೂ ಪ್ರಕರಣ ದಾಖಲಾಗಿದೆ. ಶ್ರೀರಾಮ ಸೇನೆ ಕಾರ್ಯಕರ್ತರ ಎರಡು ಕಾರು, ಒಂದು ಬೈಕ್ ಮತ್ತು 14 ಮೊಬೈಲ್ಗಳನ್ನ ವಶಕ್ಕೆ ಪಡೆದಿದ್ದಾರೆ. ನಿನ್ನೆ ಮುಂಜಾನೆ ದೊಡ್ಡಬಳ್ಳಾಪುರ ನಗರದ ಐಬಿ ಸರ್ಕಲ್ ಬಳಿ ಈ ಘಟನೆ ನಡೆದಿದೆ. 23 ಮಂದಿಯನ್ನ ಪೋಲಿಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.