Publish Date: Sun, 29 Mar 2020 (18:14 IST)
Updated Date: Sun, 29 Mar 2020 (18:18 IST)
ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದರೂ ಈ ಜಿಲ್ಲೆಯಲ್ಲಿ ಮಾತ್ರ ಮದ್ಯ ಮಾರಾಟ ಸದ್ದಿಲ್ಲದೇ ನಡೆಯುತ್ತಿದೆ.
ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ಲಕ್ಷಾಂತರ ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದಾರೆ.
ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ್ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧವಿದ್ದರೂ ಗ್ರಾಮದಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಎರಡು ಕಡೆ ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಸಿಬ್ಬಂದಿ ದಾಳಿ ಮಾಡಿದ್ದಾರೆ. ಅಕ್ರಮವಾಗಿ ಸಂಗ್ರಹಿಸಿಟ್ಟ ಲಕ್ಷಾಂತರ ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದಾರೆ.
ಈ ಸಂಬಧ ಆಯಾ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.