ಬೇಲೇಕೇರಿ ಅಕ್ರಮ ಗಣಿಗಾರಿಕೆ, ಕೈ ಶಾಸಕ ಸತೀಶ್ ಸೈಲ್‌ಗೆ ಕೊಂಚ ರಿಲೀಫ್‌

Sampriya
ಗುರುವಾರ, 13 ನವೆಂಬರ್ 2025 (18:02 IST)
ಕಾರವಾರ: ಅಕ್ರಮ ಅದಿರು ಸಾಗಾಟ ಹಾಗೂ ಮಾರಾಟ ಪ್ರಕರಣದ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ  ಸತೀಶ್ ಸೈಲ್‌ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಶಾಸಕರಿಗೆ ನೀಡಲಾಗಿದ್ದ ಮಧ್ಯಂತರ ವೈದ್ಯಕೀಯ ಜಾಮೀನು ಅವಧಿಯನ್ನು ನ್ಯಾಯಾಲಯವು ನವೆಂಬರ್ 20ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದರಿಂದ, ಶಾಸಕರಿಗೆ ಕೊಂಚ ರಿಲೀಫ್ ಸಿಕ್ಕಿದೆ.

ನ್ಯಾಯಮೂರ್ತಿಗಳು ಈ ಕುರಿತು ಆದೇಶ ಹೊರಡಿಸಿದ್ದು, ಶಾಸಕರ ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಲು ಅರ್ಹ ವೈದ್ಯರ ಹೆಸರನ್ನು ಸೂಚಿಸುವಂತೆ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ನಿರ್ದೇಶನ ನೀಡಿದ್ದಾರೆ. 

ಶಾಸಕ ಸತೀಶ್ ಸೈಲ್‌ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ. 

ವಿಶೇಷ ನ್ಯಾಯಾಲಯವು ಇತ್ತೀಚೆಗೆ ಶಾಸಕ ಸತೀಶ್ ಅವರು ತನಿಖೆಗೆ ಸಹಕರಿಸುತ್ತಿಲ್ಲ ಹಾಗೂ ಸೂಚಿಸಲಾದ ವೈದ್ಯಕೀಯ ಚಿಕಿತ್ಸೆಗೆ ಬದ್ಧರಾಗಿಲ್ಲ ಎಂಬ ಕಾರಣ ನೀಡಿ ಅವರ ವೈದ್ಯಕೀಯ ಜಾಮೀನನ್ನು ರದ್ದುಗೊಳಿಸಿ, ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು.

ಆದೇಶವನ್ನು ಪ್ರಶ್ನಿಸಿ ಸೈಲ್ ಅವರು ಹೈಕೋರ್ಟ್‌ಗೆ ಮೇಲ್ಮನವಿ ಸರ್ಜಿ ಸಲ್ಲಿಸಿದ್ದರು. 

ನ್ಯಾಯಾಲಯವು ಅರ್ಜಿಯ ವಿಚಾರಣೆಯನ್ನು ನವೆಂಬರ್ 13ಕ್ಕೆ ಮುಂದೂಡಿದ್ದು, ಅಲ್ಲಿಯವರೆಗೆ ಮಧ್ಯಂತರ ಜಾಮೀನು ಮುಂದುವರೆಸಿತ್ತು. ಇದೀಗ ಮತ್ತೆ ಒಂದು ವಾರಗಳ ಕಾಲ ಜಾಮೀನು ವಿಸ್ತರಣೆ ಮಾಡಿ ಆದೇಶಿಸಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಶಬರಿಮಲೆ ಯಾತ್ರೆ ಶುರು, ದರ್ಶನಕ್ಕೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

ಬಿಹಾರ ಫಲಿತಾಂಶ ಬೆನ್ನಲ್ಲೇ ರಾಹುಲ್ ಗಾಂಧಿಯನ್ನು ಭೇಟಿಯಾದ ಸಿದ್ದರಾಮಯ್ಯ

ಕೇಳಿದಾಗ ಮೊಬೈಲ್ ಕೊಡಿಸಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಬಾಲಕ

ಮುಂದಿನ ಸುದ್ದಿ
Show comments