Publish Date: Fri, 13 Jul 2018 (20:43 IST)
Updated Date: Fri, 13 Jul 2018 (20:46 IST)
ರಾಜ್ಯದಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸ್ವಾಮಿ ಮಲೈ ಅರಣ್ಯ ಪ್ರದೇಶದಲ್ಲಿ ಖಾಸಗಿ ಗಣಿ ಕಂಪನಿಗಳಿಗೆ ಅಕ್ರಮ ಗಣಿಗಾರಿಕೆ ಮಾಡಲು ಕಾನೂನು ಬಾಹಿರವಾಗಿ ಅವಕಾಶ ಮಾಡಿಕೊಟ್ಟಿದೆ ಅಂತ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಗಂಭೀರ ಆರೋಪ ಮಾಡಿದ್ದಾರೆ.
ಅಕ್ರಮ ಗಣಿಗಾರಿಕೆಯಿಂದ ಅಲ್ಲಿರುವ ಸಾವಿರಾರು ವರ್ಷಗಳ ಇತಿಹಾಸ ಇರುವ ಐತಿಹಾಸಿಕ ಸ್ಮಾರಕವಾದ ಪಾರ್ವತಿ - ಕಾರ್ತಿಕೆಯನ್ ದೇಗುಲವನ್ನು ಬಳ್ಳಾರಿ ಪ್ರಮುಖ ಗಣಿ ಕಂಪನಿಗಳಾದ ಜಿಂದಾಲ್ ಮತ್ತು ಬಲ್ಡೋಟಾ ಕಂಪನಿಗಳು ಅಪೋಸನ ಪಡೆಯುತ್ತಿವೆ ಎಂದು ಕಳವಳ ವ್ಯಕ್ತಪಡಿಸಿರು. ಹೀಗಾಗಿ ಈ ದೇಗುಲವನ್ನು ರಕ್ಷಿಸಲು ಸಿಇಸಿ ಸಮಾಜ ಪರಿವರ್ತನಾ ಸಮುದಾಯ ಒತ್ತಾಯಿಸಿದೆ ಎಂದರು. ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಗಸ್ಟ್ 18, 2017 ರಂದು ಸ್ಮಾರಕಗಳ ಇರುವ ಜಾಗದಲ್ಲಿ ಕೇವಲ 300 ಮೀಟರ್ ಅಂತರದಲ್ಲಿ ಗಣಿಗಾರಿಕೆ ನಡೆಸಲು ಕಾಯ್ದೆಗೆ ತಿದ್ದುಪಡಿ ಮಾಡಿದೆ.
ಇದು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಹುನ್ನಾರ ಅಡಗಿದೆ. ಹಾಗಿಲ್ಲದಿದ್ದರೆ, ಸುಪ್ರೀಂ ಕೋರ್ಟ್ ತೀರ್ಪು ಮತ್ತು ನಮ್ಮದೇ ರಾಜ್ಯ ಸರ್ಕಾರ ಈ ಹಿಂದೆ ಮಾಡಿದ ಕಾನೂನು ಮುರಿದು ಈ ರೀತಿಯ ಅವಕಾಶ ಮಾಡಿಕೊಡುತ್ತಿರಲಿಲ್ಲ ಎಂದು ಹಿರೇಮಠ ಆರೋಪಿಸಿದ್ದಾರೆ.
Jagadeesh
Publish Date: Fri, 13 Jul 2018 (20:43 IST)
Updated Date: Fri, 13 Jul 2018 (20:46 IST)