Publish Date: Tue, 02 Apr 2024 (20:43 IST)
Updated Date: Tue, 02 Apr 2024 (20:49 IST)
ತಮಿಳುನಾಡು: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ವಿರುದ್ಧ ದೂರು ದಾಖಲಾಗಿದೆ.
ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿದೆ.
ಉಚ್ಚಾಟಿತ ಟಿಎಂಸಿ ಶಾಸಕಿ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.
ದೆಹಲಿಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೀಡಿದ್ದ ಏಜೆನ್ಸಿಯ ಸಮನ್ಸ್ ಅನ್ನು ಮಹುಮಾ ಮೊಯಿತ್ರಾ ತಪ್ಪಿಸಿಕೊಂಡ ಹಿನ್ನೆಲೆ ಇಡಿ ಈ ಕ್ರಮ ಕೈಗೊಂಡಿದೆ.
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘನೆ ಪ್ರಕರಣದಲ್ಲಿ ವಿಚಾರಣೆಗಾಗಿ ಮೊಯಿತ್ರಾ ಮತ್ತು ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಗೆ ಇಡಿ ಸಮನ್ಸ್ ನೀಡಿತ್ತು.