Daily Horoscope
✕

ಅಕ್ರಮ ಹಣ ವರ್ಗಾವಣೆ: ಸತೀಶ್ ಸೈಲ್‌ 2 ದಿನ ಇಡಿ ಕಸ್ಟಡಿಗೆ

Sampriya
ಬುಧವಾರ, 10 ಸೆಪ್ಟಂಬರ್ 2025 (17:14 IST)
Photo Credit X
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪದಡಿ ಜೈಲು ಸೇರಿರುವ ಕಾಂಗ್ರೆಸ್ ಶಾಸಕ ಸತೀಶ್ ಜೈಲ್ ಅವರನ್ನು ಇದೀಗ 2ದಿನ ಇ.ಡಿ ಕಸ್ಟಡಿಗೆ ನೀಡಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ.

ಮಧ್ಯಂತರ ಜಾಮೀನು ನೀಡುವಂತೆ ಸೈಲ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ಅನಾರೋಗ್ಯದ ಹಿನ್ನೆಲೆ ಜಾಮೀನು ನೀಡಲು ಮನವಿ ಮಾಡಿದ್ದರು. ಇನ್ನು ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸುವ ಸಲುವಾಗಿ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಅವರನ್ನು ಇ.ಡಿ ಕಸ್ಟಡಿಗೆ ಕೇಳಿದ್ದರು. 

ನ್ಯಾ.ಸಂತೋಷ್ ಗಜಾನನ ಭಟ್ ಅವರು ಪ್ರಕರಣದ ವಿಚಾರಣೆ ನಡೆಸಿ ಸತೀಶ್ ಸೈಲ್ ಅವರನ್ನು 2ದಿನ ಇ.ಡಿ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದ್ದಾರೆ.

ಸೆ.12ರಂದು ಸಂಜೆ 5 ಗಂಟೆಗೆ ಮತ್ತೆ ಕೋರ್ಟ್‌ ಮುಂದೆ ಹಾಜರುಪಡಿಸಲು ಸೂಚಿಸಲಾಗಿದೆ. 

ಈಚೆಗೆ ಅವರ ಮನೆ ಮೇಲೆ ದಾಳಿ ನಡೆಸಿದ್ದ ಇ.ಡಿ ಕೋಟ್ಯಂತರ ರೂ. ಹಣ ಹಾಗೂ ಚಿನ್ನದ ಬಿಸ್ಕೆಟ್‌ಗಳನ್ನು ವಶಕ್ಕೆ ಪಡೆದಿತ್ತು. 1.68 ಕೋಟಿ ನಗದು, 6.75 ಕೆಜಿ ಚಿನ್ನದ ಬಿಸ್ಕೆಟ್‌ಗಳು ಮತ್ತು 14.13 ಕೋಟಿ ಹಣ ಹೊಂದಿರುವ ಬ್ಯಾಂಕ್ ಖಾತೆಯನ್ನು ಜಾರಿ ನಿರ್ದೇಶನಾಲಯ ಸೀಜ್ ಮಾಡಿತ್ತು. 

ಅಕ್ರಮ ಅದಿರು ಪ್ರಕರಣದಲ್ಲಿ ಜಾಮೀನಿನ ಮೇಲೆ ಶಾಸಕ ಸತೀಶ್ ಸೈಲ್ ಹೊರಗಿದ್ದರು. ಆ.13 ಮತ್ತು 14 ರಂದು ಇ.ಡಿ ಅಧಿಕಾರಿಗಳು, ಶಾಸಕರ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದರು. ಈ ವೇಳೆ ಅಪಾರ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸತೀಶ್ ಸೈಲ್ ಅವರನ್ನು ಮಂಗಳವಾರ ಇ.ಡಿ ಅಧಿಕಾರಿಗಳು ಬಂಧಿಸಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮನಗರದಲ್ಲಿ ಹೈಡ್ರಾಮಾ: ನಿಖಿಲ್ ಕುಮಾರಸ್ವಾಮಿ ಭೇಟಿಗೂ ಮುನ್ನ ಮಾರಮ್ಮ ದೇಗುಲಕ್ಕೆ ಬೀಗ

ಸೋನಿಯಾ ಗಾಂಧಿ ವಿರುದ್ಧ ವಿವಾದಾತ್ಮಕ ಪೋಸ್ಟ್: ಬಿಜೆಪಿ ಸಂಸದೆ ಕಂಗನಾ ರಣಾವತ್ ವಿರುದ್ಧಎಫ್ಐಆರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಎದೆ ಝಲ್ಲೆನಿಸುವ ವಿಡಿಯೋ.. ರೀಲ್ಸ್ ಗಾಗಿ ಹುಲಿ ಜೊತೆ ತುಂಟಾಟ: ಕೊನೆಗೆ ಆಗಿದ್ದು ಭೀಕರ ದುರಂತ Video

ರಾಹುಲ್ ಗಾಂಧಿ ಕಾಲರ್ ಹಿಡಿದು ಎಳೆದ್ರು, ಮೋದಿ ಕೈ ಜೋಡಿಸಿದ್ರು, ಇದೇ ನೋಡಿ ನಮಗೂ ನಿಮಗೂ ವ್ಯತ್ಯಾಸ: ಡಿಕೆಶಿಗೆ ಬಿಜೆಪಿ ಟಾಂಗ್ Video

ಮುಂದಿನ ಸುದ್ದಿ
Show comments