Select Your Language

Notifications

webdunia
webdunia
webdunia
webdunia

ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲೂ ಅಕ್ರಮ?

ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲೂ ಅಕ್ರಮ?
ಧಾರವಾಡ , ಸೋಮವಾರ, 21 ನವೆಂಬರ್ 2022 (12:02 IST)
ಧಾರವಾಡ : ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಇನ್ನೂ ಹಸಿರಿರುವಾಗಲೇ ಇದೀಗ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲೂ ಅಕ್ರಮ ನಡೆದಿದ್ಯಾ ಎಂಬ ಪ್ರಶ್ನೆ ಎದ್ದಿದೆ.

2022ರ ಮೇ ತಿಂಗಳಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿತ್ತು. ಈ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟ ಮಾಡಲಾಗಿದ್ದು, ಅದರಲ್ಲೂ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

ಸರ್ಕಾರ 2022 ರ ಮೇ ತಿಂಗಳಿನಲ್ಲಿ ಸಿಇಟಿ ಪರೀಕ್ಷೆ ನಡೆಸಿ, ಆ ಮೂಲಕ ಶಿಕ್ಷಕರ ನೇಮಕಾತಿ ನಡೆಸಿತ್ತು. ಈ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳಿಂದ ದಾಖಲೆಗಳ ಪರಿಶೀಲನೆಯನ್ನೂ ಸರ್ಕಾರ ನಡೆಸಿತ್ತು.

ವಿಪರ್ಯಾಸವೆಂದರೆ ಸಿಇಟಿ ಪರೀಕ್ಷೆ ಪಾಸಾಗಿ ದಾಖಲೆಗಳ ಪರಿಶೀಲನೆಗೆ ಹಾಜರಾಗದ ಅಭ್ಯರ್ಥಿಗಳ ಹೆಸರನ್ನೂ ಇದೀಗ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಪ್ರಕಟ ಮಾಡಲಾಗಿದ್ದು, ಇದು ಅರ್ಹ ಅಭ್ಯರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ನೈಟ್ಕ್ಲಬ್ನಲ್ಲಿ ಗುಂಡಿನ ದಾಳಿ! 5 ಸಾವು, 18 ಮಂದಿಗೆ ಗಾಯ