Select Your Language

Notifications

webdunia
webdunia
webdunia
webdunia

ಪಿಕ್ ಅಪ್ ವಾಹನದಲ್ಲಿ 33ಲಕ್ಷ ಮೌಲ್ಯದ ಅಕ್ರಮ ಮದ್ಯ ಪತ್ತೆ

Illicit liquor worth 33 lakhs was found in the pick-up vehicle
ಬೆಳಗಾವಿ , ಮಂಗಳವಾರ, 28 ಮಾರ್ಚ್ 2023 (17:30 IST)
ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿದ್ದು ರಾಜ್ಯದ ಗಡಿಯಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಬೆಳಗಾವಿ ಗಡಿಯಲ್ಲಿ ತಪಾಸಣೆ ನಡೆಸುವಾಗ ಬುಲೆರೋ ಪಿಕ್ ಅಪ್ ವಾಹನದಲ್ಲಿ 33ಲಕ್ಷ ಮೌಲ್ಯದ ಅಕ್ರಮ ಮದ್ಯ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹಾಗೂ ವಿಜಯಪುರ ಜಿಲ್ಲೆಯ ಝಳಕಿ ಚೆಕ್ ಪೋಸ್ಟ್‌ನ ಬಳಿ ಮಧ್ಯರಾತ್ರಿ ತಪಾಸಣೆ ವೇಳೆ ಅಪಾರ ಪ್ರಮಾಣದ ಹಣ ಪತ್ತೆಯಾಗಿದ್ದು, ಬೆಂಗಳೂರಿನಿಂದ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಹೊರಟಿದ್ದ ವಾಹನದಲ್ಲಿ 54.49 ಲಕ್ಷ ರು. ಹಣ ಪತ್ತೆಯಾಗಿದೆ. ಅಷ್ಟೇ ಅಲ್ಲದೆ ಕೇರಳ ಕಡೆಯಿಂದ ಗುಂಡ್ಲುಪೇಟೆ ಕಡೆಗೆ ಬರುತ್ತಿದ್ದ ಕೇರಳ ನೋಂಣಿಯ KL-73 A 6995 ಸ್ವೀಫ್ಟ್ ಮಾರುತಿ ಕಾರನ್ನು ಪರಿಶೀಲಿಸಿದಾಗ ದಾಖಲೆ ಇಲ್ಲದ 3 ಲಕ್ಷ ರೂಪಾಯಿ ಹಣ ಪತ್ತೆಯಾದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೋನಿಗೆ ಬಿದ್ದ ಚಿರತೆ