Publish Date: Mon, 22 Jul 2019 (16:05 IST)
Updated Date: Mon, 22 Jul 2019 (16:06 IST)
ಐಎಂಎ ಸಂಸ್ಥೆಯ ಬಹುಕೋಟಿ ರೂಪಾಯಿ ವಂಚನೆ ಹಗರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಮುಖ್ಯಸ್ಥ ಮನ್ಸೂರ ಖಾನ್ ನನ್ನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಐಎಂಎ ಸಂಸ್ಥೆಯ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಕಂಪನಿ ಮುಖ್ಯಸ್ಥ ಮನ್ಸೂರ್ ಖಾನ್ ಈಗಾಗಲೇ ಜಾರಿ ನಿರ್ದೇಶನಾಲಯದ ವಶದಲ್ಲಿದ್ದಾನೆ.
ತನಿಖೆ ಹಾಗೂ ವಿಚಾರಣೆ ವೇಳೆಯಲ್ಲಿ ಆತ ಎದೆ ನೋವು ಅಂತ ಹೇಳಿಕೊಂಡಿದ್ದಾನೆ. ಹೀಗಾಗಿ ಅಧಿಕಾರಿಗಳು ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಹಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನ್ಸೂರ ಖಾನ್ ವಿರುದ್ಧ ವಿವಿಧೆಡೆ 30 ಸಾವಿರಕ್ಕೂ ಅಧಿಕ ಕೇಸ್ ಗಳು ದಾಖಲಾಗಿವೆ.