Webdunia - Bharat's app for daily news and videos

Install App

IMD Weather Forecast: ಈ ತಿಂಗಳ ಕೊನೆಯಲ್ಲಿ ಈ ಭಾಗಗಲ್ಲಿ ಭಾರೀ ಮಳೆ

Sampriya
ಭಾನುವಾರ, 26 ಜನವರಿ 2025 (12:02 IST)
Photo Courtesy X
ಬೆಂಗಳೂರು: ಕಳೆದ ಕೆಲ ದಿನಗಳಿಂದ ದೇಶದ ಹಲವೆಡೆ ವಿಪರೀತ ಚಳಿಯ ಚಳಿಯ ವಾತಾವರಣವಿದ್ದು, ಇದೀಗ ಹವಾಮಾನ ಇಲಾಖೆ ಪ್ರಕಾರ ಈ ತಿಂಗಳ ಕೊನೆಯಲ್ಲಿ ದೇಶದ ಕೆಲವೆಡೆ ಭಾರೀ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಚಂಡಮಾರುತದ ಪರಿಣಾಮ  ದೇಶದ ಹಲವು ಭಾಗಗಳಲ್ಲಿ ಭೀಕರ ಚಳಿ ನಡುವೆಯೂ ಮಳೆಯಾಗುವ ಸಾಧ್ಯತೆಯಿದೆ.

ಜನವರಿ 29 ಮತ್ತು 30ರಂದು ಪಶ್ಚಿಮ ಹಿಮಾಲಯ ಪ್ರದೇಶದ ಅಲ್ಲಲ್ಲಿ ಪ್ರತ್ಯೇಕವಾಗಿ ದಟ್ಟ ಮಂಜಿನ ನಡುವೆಯೇ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಇದೇ ವೇಳೆ ಒಡಿಶಾ, ಅಸ್ಸಾಂ, ಮೇಘಾಲಯದ ಪ್ರತ್ಯೇಕ ಭಾಗಗಳಲ್ಲಿ, ಉತ್ತರಾಖಂಡ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ತ್ರಿಪುರದ ಪ್ರತ್ಯೇಕ ಭಾಗಗಳಲ್ಲಿ ಭೀಕರ ಚಳಿ ನಡುವೆ ಮಳೆಯಾಗುವ ಸಾಧ್ಯತೆಯಿದೆ.

ಅದಲ್ಲದೆ ಹವಾಮಾನ ಇಲಾಖೆ ಮುನ್ಸುಚನೆ ಪ್ರಕಾರ ಹಿಮಾಚಲ ಪ್ರದೇಶ ಮತ್ತು ಪಂಜಾಬ್‌ನ ಪ್ರತ್ಯೇಕ ಭಾಗಗಳಲ್ಲಿ ಇದೇ ರೀತಿಯ ವಾತಾವರಣವಿರಲಿದೆ.

ಇನ್ನು ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಜನವರಿ 26ರಿಂದ 28ರವರೆಗೆ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಪ್ರತ್ಯೇಕ ಭಾಗಗಳಲ್ಲಿ ದಟ್ಟ ಮಂಜು ಕವಿದ ವಾತಾವರಣ ಇರಲಿದೆ. ಜನವರಿ 26 & 27ರಂದು ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲೂ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹೇಶ್ ಶೆಟ್ಟಿ ದಕ ಜಿಲ್ಲೆಯಿಂದ ಗಡಿಪಾರು ಆದೇಶದಲ್ಲಿ ಮಹತ್ವದ ಬೆಳವಣಿಗೆ

ಯುಪಿಎ ಸರ್ಕಾರ ಮುಂಬೈ ದಾಳಿ ಬಳಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಬೇಕೆಂದಿತ್ತು, ಅಮೆರಿಕಾ ಬೇಡ ಎಂದಿತು: ಪಿ ಚಿದಂಬರಂ

ಜಾತಿಗಣತಿ ನೆಪ ಮಾತ್ರ ಹಿಂದೂಗಳನ್ನು ಒಡೆಯುವುದೇ ಕೆಲಸ: ಬಿವೈ ವಿಜಯೇಂದ್ರ

ಪಾಪ ಖರ್ಗೆ ಕುಟುಂಬಕ್ಕೆ ಸರ್ಕಾರ ಮೊದಲು ಪರಿಹಾರ ಕೊಡಲಿ: ಬಿವೈ ವಿಜಯೇಂದ್ರ

ಉಪವಾಸ ಮುಗಿದ ತಕ್ಷಣ ಏನನ್ನು ಸೇವಿಸಬೇಕು ಮತ್ತು ಸೇವಿಸಬಾರದು

ಮುಂದಿನ ಸುದ್ದಿ
Show comments