Publish Date: Fri, 15 Feb 2019 (15:54 IST)
Updated Date: Fri, 15 Feb 2019 (15:57 IST)
ಹೆಂಡತಿಯ ಅನೈತಿಕ ಸಂಬಂಧಕ್ಕೆ ಅಣ್ಣನೇ ತಮ್ಮನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.
ತನ್ನ ಹೆಂಡತಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ತಮ್ಮನನ್ನೆ ಕೊಚ್ಚಿ ಕೊಲೆ ಮಾಡಿದ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಕಕ್ಕಳಮೇಲಿ ಗ್ರಾಮದಲ್ಲಿ ನಡೆದಿದೆ.
32 ವರ್ಷದ ಸಿದ್ದರಾಮ ಶಿವಪ್ಪ ಬಳಬಟ್ಟಿ ಕೊಲೆಯಾದ ವ್ಯಕ್ತಿ. ಮೃತ ಸಿದ್ದರಾಮ ಬಳಬಟ್ಟಿ ಅಣ್ಣನ ಹೆಂಡತಿಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಎನ್ನುವ ವಿಷಯಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿದೆ ಎನ್ನಲಾಗಿದೆ.
ಬೆಳಿಗ್ಗೆ ಮನೆಯಲ್ಲಿ ಸಿದ್ದರಾಮ ಸ್ನಾನ ಮಾಡುವಾಗ ಅಣ್ಣ ನಿಂಗಪ್ಪ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿದ್ದು, ಕೊಲೆಗೈದ ಆರೋಪಿ ನಿಂಗಪ್ಪನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.