Select Your Language

Notifications

webdunia
webdunia
webdunia
webdunia

ಮಾದರಿ ನೀತಿ ಸಂಹಿತೆ ಜಾರಿ: ಬೆಂಗಳೂರಿನಲ್ಲಿ ನಿಗಾಕ್ಕೆ ತುಷಾರ್ ಗಿರಿನಾಥ್ ಆದೇಶ

Code OF Conduct

Sampriya

ಬೆಂಗಳೂರು , ಶನಿವಾರ, 16 ಮಾರ್ಚ್ 2024 (17:49 IST)
ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನ ನಿಗದಿ ಬೆನ್ನಲ್ಲೇ ಬೆಂಗಳೂರು ನಗರದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ. 
 
ಈ ಸಂಬಂಧ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ ತೆಗದು ಹಾಕಲು ಸೂಚಿಸಿದ್ದಾರೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಎಚ್ಚರ ವಹಿಸಲು ಸೂಚಿಸಿದ್ದಾರೆ. 
 
ಯಾವುದೇ ಫ್ಲೆಕ್ಸ್, ಪೋಸ್ಟರ್, ಬ್ಯಾನರ್, ಬಿತ್ತಿಪತ್ರಗಳು, ಗೋಡೆ ಬರಹಗಳನ್ನು ತೆಗೆದು ಹಾಕಬೇಕು. ಅದಲ್ಲದೆ ಕುಡಿಯುವ ನೀರಿನ ಘಟಕ, ಉದ್ಯಾನವನ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರದಲ್ಲಿ ಅದನ್ನು ತೆಗೆಯುವಂತೆ ಸೂಚಿಸಿದ್ದಾರೆ. 
 
ಸರ್ಕಾರದ ವೆಬ್‌ಸೈಟ್‌ಗಳಲ್ಲಿ ಪ್ರಕಟವಾಗಿರುವ  ರಾಜಕೀಯ ಪ್ರತಿನಿಧಿಗಳ ಭಾವಚಿತ್ರಗಳನ್ನು 24 ಗಂಟೆಯೊಳಗೆ ತೆಗೆದು ಹಾಕಬೇಕು. ಆರ್‌ಒ, ಎಆರ್‌ಒ ಕಚೇರಿಗಳಲ್ಲಿ ನಿಯಂತ್ರಣ ಕೊಠಡಿ ಸ್ಥಾಪನೆಗೆ, ಎಫ್‌ಎಸ್‌ಟಿ, ಎಸ್‌ಎಸ್‌ಟಿ ಸೇರಿದಂತೆ ಇನ್ನಿತರೆ ತಂಡಗಳನ್ನ ಸಕ್ರಿಯಗೊಳಿಸುವಂತೆ ಅಧಿಕಾರಿಗಳ ಆಂತರಿಕ ಸಭೆಯಲ್ಲಿ ಸೂಚನೆ ನೀಡಲಾಗಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಬಳಿ ಹಣವೇ ಇಲ್ಲ: ಪ್ರಧಾನಿ ಮೋದಿ ವಾಗ್ದಾಳಿ