Select Your Language

Notifications

webdunia
webdunia
webdunia
webdunia

ಶಾಶ್ವತ ಕುಡಿಯುವ ನೀರು ಯೋಜನೆ ಅನುಷ್ಠಾನ: ಕೇಂದ್ರದ ಸ್ಪಂದನೆಯ ನಿರೀಕ್ಷೆಯಲ್ಲಿ ರಾಜ್ಯ ಸರಕಾರ

ಶಾಶ್ವತ ಕುಡಿಯುವ ನೀರು ಯೋಜನೆ ಅನುಷ್ಠಾನ: ಕೇಂದ್ರದ ಸ್ಪಂದನೆಯ ನಿರೀಕ್ಷೆಯಲ್ಲಿ ರಾಜ್ಯ ಸರಕಾರ
ಬೆಂಗಳೂರು , ಭಾನುವಾರ, 15 ಮೇ 2016 (10:39 IST)
ಬೆಂಗಳೂರು: ಶಾಶ್ವತ ಕುಡಿಯುವ ನೀರು ಯೋಜನೆ ಅನುಷ್ಠಾನಗೊಳಿಸಲು 12,572 ಕೋಟಿ ರೂಪಾಯಿ ಅನುದಾನವನ್ನು ಪರಿಹಾರದ ರೂಪದಲ್ಲಿ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲಾಗಿದ್ದು, ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಸ್ಪಂದನೆಯ ನಿರೀಕ್ಷೆಯಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ವಿಧಾನಸೌಧದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರದಿಂದ ರಾಜ್ಯಕ್ಕೆ ದೊರೆತಿರುವ 1540 ಕೋಟಿ ರೂಪಾಯಿ ಬೆಳೆ ನಷ್ಟ ಪರಿಹಾರ ಮೊತ್ತವನ್ನು ಆರ್‌ಟಿಜಿಎಸ್ ಮೂಲಕ ನೇರವಾಗಿ ರೈತರ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ. ಆದರೇ ರಾಜ್ಯಕ್ಕೆ ಲಭ್ಯವಾಗಬೇಕಿದ್ದ ಬರ ಪರಿಹಾರದ ಮೊತ್ತ ಬಿಡುಗಡೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ತಿಳಿಸಿದ್ದಾರೆ.
 
ಪ್ರಸ್ತುತ 1300 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ಪ್ರತಿಪಕ್ಷ ನಾಯಕರು ಮಹದಾಯಿ ಯೋಜನೆಯ ಅನುಷ್ಠಾನಕ್ಕೆ ತೋರಬೇಕಾದ ಕಾಳಜಿಯನ್ನು ತೋರುತ್ತಿಲ್ಲ ಎಂದು ಪ್ರತಿಪಕ್ಷ ನಾಯಕರ ಮೇಲೆ ಆರೋಪ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಮುಖ್ಯಮಂತ್ರಿಯಿಂದ ತುಘಲಕ್ ದರ್ಬಾರ: ಬಿ.ಎಸ್‌.ಯಡಿಯೂರಪ್ಪ