Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಪಾಲಿಗೆ ಇಂದು ಮಹತ್ವದ ದಿನ

ಕೃಷ್ಣವೇಣಿ ಕೆ
ಶನಿವಾರ, 30 ಮೇ 2026 (09:50 IST)
ಬೆಂಗಳೂರು: ಸಿದ್ದರಾಮಯ್ಯ ರಾಜೀನಾಮೆ ಬಳಿಕ ಕರ್ನಾಟಕದ ಮುಂದಿನ ಸಿಎಂ ಎನ್ನಲಾಗುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ ಗೆ ಇಂದು ಮಹತ್ವದ ದಿನವಾಗಿದೆ.

ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸ್ಥಾನಕ್ಕೆ ಮೊನ್ನೆ ಸಿದ್ದರಾಮಯ್ಯ ರಾಜೀನಾಮೆ ಸೂಚಿಸಿದ್ದರು. ಇದಾದ ಬಳಿಕ ಹೊಸ ಕ್ಯಾಬಿನೆಟ್ ರಚನೆ ಸಲುವಾಗಿ ನಿನ್ನೆಯಿಡೀ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಪ್ರಮುಖ ನಾಯಕರು ಚರ್ಚೆ ನಡೆಸಿದ್ದರು.

ಇದೀಗ ಎಲ್ಲವೂ ಅಂತಿಮವಾಗಿದ್ದು ಇಂದು ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಇದುವರೆಗೆ ಡಿಕೆ ಶಿವಕುಮಾರ್ ಸಿಎಂ ಎಂದು ಅಧಿಕೃತವಾಗಿ ಘೋಷಿಸಲಾಗಿಲ್ಲ. ಆದರೆ ಇಂದು ನಡೆಯುವ ಶಾಸಕಾಂಗ ಪಕ್ಷದ ಸಭೆಯಲ್ಲೇ ಸಿಎಂ ಘೋಷಣೆಯಾಗಲಿದೆ.

ಹೀಗಾಗಿ ಡಿಕೆ ಶಿವಕುಮಾರ್ ಪಾಲಿಗೆ ಇಂದು ಮಹತ್ವದ ದಿನವಾಗಿದೆ. ಇದಾದ ಬಳಿಕ ಅವರು ಯಾವಾಗ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನುವುದು ಖಚಿತವಾಗಲಿದೆ. ಮೂಲಗಳ ಪ್ರಕಾರ ಸೋಮವಾರ ಡಿಕೆಶಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಅದೆಲ್ಲವೂ ಇಂದು ಘೋಷಣೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಇದೊಂದು ಪವಾಡ: 10ದಿನಗಳ ಬಳಿಕ ಬದುಕುಳಿದ ಮಹರ್ಜನ್ ಕುಟುಂಬದ ಪ್ರತಿಕ್ರಿಯೆ

ಡಿಕೆ ಶಿವಕುಮಾರ್‌ ಡಮ್ಮಿ, ರಿಮೋಟ್ ಕಂಟ್ರೋಲ್ಡ್‌ ಸಿಎಂ: ಆರ್‌ ಅಶೋಕ್ ಕಿಡಿ

ಮುಂದಿನ ಸುದ್ದಿ
Show comments