Select Your Language

Notifications

webdunia
webdunia
webdunia
webdunia

ಕರ್ನಾಟಕ - ಮಹಾರಾಷ್ಟ್ರ ಗಡಿವಿವಾದ ವಿಷಯಕ್ಕೆ ಸಂಬಂಧಿಸಿದಂತೆ ಸಿಎಂ ಮಹತ್ವವಾದ ನಿರ್ಧಾರ..!

ಕರ್ನಾಟಕ - ಮಹಾರಾಷ್ಟ್ರ ಗಡಿವಿವಾದ ವಿಷಯಕ್ಕೆ ಸಂಬಂಧಿಸಿದಂತೆ ಸಿಎಂ ಮಹತ್ವವಾದ ನಿರ್ಧಾರ..!
ಹುಬ್ಬಳ್ಳಿ , ಭಾನುವಾರ, 4 ಸೆಪ್ಟಂಬರ್ 2022 (21:35 IST)
ಸರ್ವೋಚ್ಛ ನ್ಯಾಯಾಲಯದಲ್ಲಿ ಬರುವ  ನವೆಂಬರ್ 23ರಂದು ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ವಿಷಯ ವಿಚಾರಣೆಗೆ ಬರಲಿದೆ.ರಾಜ್ಯದ ಪರವಾಗಿ ವಾದ ಮಂಡಿಸಲು ಅನುಭವಿ ಹಾಗೂ ಹಿರಿಯ ಕಾನೂನು ತಜ್ಞರ ತಂಡ ನೇಮಕ ಮಾಡಲಾಗುವುದು  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
 
ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ   ಅವರು, ಗಡಿವಿವಾದ ಕುರಿತು ಅಡ್ವಕೇಟ್ ಜನರಲ್ ಅವರೊಂದಿಗೆ ಚರ್ಚಿಸಿ , ಅಗತ್ಯ ಸಲಹೆ ಸೂಚನೆ ನೀಡಲಾಗಿದೆ.  ಸಾಕಷ್ಟು ಅಧ್ಯಯನ ಸಹ ನಡೆಸಲಾಗಿದೆ. ವಾದ ಮಂಡನೆಗೆ ಹಿರಿಯ,ಅನುಭವಿ ವಕೀಲರನ್ನು  ನೇಮಿಸಲು ಸೂಚಿಸಲಾಗಿದೆ.
 
 ವೃತ್ತಿಶಿಕ್ಷಣ ಪ್ರವೇಶಕ್ಕೆ  ಸಿಇಟಿ ಅಂಕ   ಪರಿಗಣನೆಗೆ ಸಂಬಂಧಿಸಿದಂತೆ  ಹೈಕೋರ್ಟ್ ನೀಡಿರುವ  ಆದೇಶ  ಅಧ್ಯಯನ ಮಾಡಿ ವರದಿ ಸಲ್ಲಿಸಲು ಅಡ್ವೊಕೇಟ್ ಜನರಲ್ ಅವರಿಗೆ ನಿರ್ದೇಶನ ನೀಡಲಾಗಿದೆ.  ಕಾನೂನು ತಜ್ಞರೊಂದಿಗೆ ಚರ್ಚಿಸಿ ಮೇಲ್ಮನವಿ ಸಲ್ಲಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
 
ಪೊಲೀಸ್ ಸಿಬ್ಬಂದಿಗೆ ಸಂಬಂಧಿಸಿದ ರಾಘವೇಂದ್ರ ಔರಾದ್‌ಕರ್  ವರದಿ ಅನುಷ್ಠಾನಗೊಳ್ಳುತ್ತಿದೆ. ಸಿಬ್ಬಂದಿಯೂ ಹೆಚ್ಚಿನ ಕೌಶಲ್ಯ ಬೆಳೆಸಿಕೊಳ್ಳಬೇಕು. ಕಂಪ್ಯೂಟರ್ ಶಿಕ್ಷಣ ಕಡ್ಡಾಯಗೊಳಿಸಲಾಗಿದೆ. ಎಲ್ಲ ಇಲಾಖೆಯ ಸಿಬ್ಬಂದಿಗೂ ಇದು ಕಡ್ಡಾಯವಾಗಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಗಣೇಶನ ವಿಸರ್ಜನೆಗೆ ಬಿಬಿಎಂಪಿಯಿಂದ ಸಕಲ ಸಿದ್ಧತೆ