Select Your Language

Notifications

webdunia
webdunia
webdunia
webdunia

ಗೃಹಲಕ್ಷ್ಮೀ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪ್ರಮುಖ ಅಂಶಗಳು

ಗೃಹಲಕ್ಷ್ಮೀ ಯೋಜನೆ
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಪಿಎಲ್, ಅಂತ್ಯೋದಯ ಕಾರ್ಡ್ದಾರರು ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಸಬಹುದು. ಸೇವಾಸಿಂಧು ಪೋರ್ಟಲ್, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು.

•             ಅರ್ಜಿದಾರರು 16-06-2023 ರಿಂದ ಅರ್ಜಿ ಸಲ್ಲಿಸಬಹುದಾಗಿರುತ್ತದೆ
  • •             ಅರ್ಜಿಗಳನ್ನು ಆನ್ಲೈನ್ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ (https://sevasindhugs.karnataka.gov.in/gruhalakshmi)
•             ಅರ್ಜಿ ಸಲ್ಲಿಕೆಗೆ SMS ಮೂಲಕ ಹಾಗೂ ಸೇವಾಸಿಂಧು ಪೋರ್ಟಲ್ ಮೂಲಕ Auto generated ಸ್ವೀಕೃತಿಗಳನ್ನು ಪಡೆಯಬಹುದಾಗಿದೆ.

•             ಅರ್ಜಿ ಸಲ್ಲಿಸಲು ಅರ್ಜಿದಾರರ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಬ್ಯಾಂಕ್ ಖಾತೆ ವಿವರಗಳು ಅಗತ್ಯವಾಗಿರುತ್ತದೆ.

•             ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ, ಸಂಪೂರ್ಣ ಉಚಿತವಾಗಿದ್ದು, ಅರ್ಜಿದಾರರು ಮಧ್ಯವರ್ತಿಗಳ ಮೇಲೆ ಅವಲಂಬಿತರಾಗದೆ ಅರ್ಜಿಯನ್ನು ಸ್ವತ ಮೇಲೆ ತಿಳಿಸಿದ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿರುತ್ತದೆ.

•             ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಯೋಜನೆಯ ಕುರಿತಂತೆ ಸಂದೇಹ/ ಕುಂದುಕೊರತೆಗಳಿದ್ದಲ್ಲಿ ಸಹಾಯವಾಣಿ (Helpline) – 1902 ಗೆ ಸಂಪರ್ಕಿಸಬಹುದಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದಲೇ ಅರ್ಜಿ ಸಲ್ಲಿಕೆ ಆರಂಭ : ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ