Webdunia - Bharat's app for daily news and videos

Install App

2019ರಲ್ಲಿ ಕೇಂದ್ರದಲ್ಲಿ ರಾಹುಲ್ ನೇತೃತ್ವದ ಸರಕಾರ ಅಧಿಕಾರಕ್ಕೆ: ಸಿಎಂ

Webdunia
ಶುಕ್ರವಾರ, 30 ಜೂನ್ 2017 (16:01 IST)
2019 ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ. ರಾಹುಲ್ ಗಾಂಧಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

 ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಆಯೋಜಿಸಲಾದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಸರಕಾರ ಬಡವರ, ದೀನದಲಿತರ ಮತ್ತು ಶೋಷಿತರ ಪರವಾಗಿ ಕಾರ್ಯನಿರ್ವಹಿಸಿದೆ. ಜನತೆಯ ಬೇಡಿಕೆಗಳನ್ನು ಈಡೇರಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು. 
 
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದು ಖಚಿತವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
 
ನಾನು ನೀಡಿದ ಐದು ಬಜೆಟ್‌ನಲ್ಲಿ ಎಲ್ಲಾ ವರ್ಗದವರಿಗೂ ಯೋಜನೆಗಳನ್ನು ರೂಪಿಸಿದ್ದೇನೆ. ಎಲ್ಲಾ ವರ್ಗದವರಿಗೂ ಸರಕಾರದ ಸೌಲಭ್ಯಗಳನ್ನು ತಲುಪಬೇಕು ಎನ್ನುವುದೇ ಸರಕಾರದ ಮುಖ್ಯ ಉದ್ದೇಶ ಎಂದರು.
 
ಪ್ರಧಾನಿ ಮೋದಿ  ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುತ್ತಾರೆ. ಆದರೆ, ಮುಸ್ಲಿಮರಿಗೆ, ದಲಿತರಿಗೆ, ಕ್ರಿಶ್ಚಿಯನ್ನರಿಗೆ ಅನ್ಯಾಯ ಮಾಡುತ್ತಾರೆ ಎಂದು ಆರೋಪಿಸಿದರು.
 
2018ರ ವಿಜಯಯಾತ್ರೆ ಬೆಳಗಾವಿಯಿಂದಲೇ ಆರಂಭವಾಗಬೇಕು. ಅದಕ್ಕಾಗಿ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತ ಮನೆ ಮನೆಗೆ ತೆರಳಿ ಸರಕಾರದ ಸಾಧನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕವು ಅಪರಾಧಿಗಳ ರಾಜ್ಯವಾಗುತ್ತಿದೆ: ಶೋಭಾ ಕರಂದ್ಲಾಜೆ ಆಕ್ಷೇಪ

ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದಿದ್ದ ವ್ಯಕ್ತಿ ಅರೆಸ್ಟ್

NEET ಪರೀಕ್ಷೆ ಹೇಗಿತ್ತು ಎಂದರೆ ವಿದ್ಯಾರ್ಥಿಗಳು ಶಾಕ್ ಆಗ್ತಿದ್ದಾರೆ: ಕಾರಣ ಇಲ್ಲಿದೆ

ಕಾನೂನು ಬಾಹಿರ ಟೆಂಡರ್ ಮೂಲಕ ಸರ್ಕಾರದಿಂದ ಭಾರೀ ಮೋಸ: ಛಲವಾದಿ ನಾರಾಯಣಸ್ವಾಮಿ

Arecanut price today: ಇಂದು ಅಡಿಕೆ, ಕಾಳುಮೆಣಸು ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments