Select Your Language

Notifications

webdunia
webdunia
webdunia
webdunia

ಬಿಬಿಎಂಪಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂದುವರಿಯುವ ವಿಶ್ವಾಸ: ಸಿಎಂ

ಬಿಬಿಎಂಪಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂದುವರಿಯುವ ವಿಶ್ವಾಸ: ಸಿಎಂ
ಬೆಂಗಳೂರು , ಮಂಗಳವಾರ, 30 ಆಗಸ್ಟ್ 2016 (16:03 IST)
ಬಿಬಿಎಂಪಿಯಲ್ಲಿ ಅಧಿಕಾರರೂಢವಾಗಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಡುವೆ ಯಾವುದೇ ಘರ್ಷಣೆ ನಡೆದಿಲ್ಲ. ಅದೇ ಮೈತ್ರಿ ಮುಂದುವರಿಯುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಯಾಕೆ ಭೇಟಿ ಮಾಡಿದ್ದಾರೋ ಎನ್ನುವ ಬಗ್ಗೆ ನನಗೆ ಮಾಹಿತಿಯಿಲ್ಲ. ಬಿಬಿಎಂಪಿಯಲ್ಲಿ ಜೆಡಿಎಸ್ ಜೊತೆ ಉತ್ತಮ ಬಾಂಧವ್ಯವಿದೆ, ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯಲ್ಲಿ ವಿರಸ ಉಂಟಾಗಿಲ್ಲ ಎಂದು ತಿಳಿಸಿದ್ದಾರೆ.
 
ನಿಗಮ ಮಂಡಳಿ ನೇಮಕ
 
ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಕಾಂಗ್ರೆಸ್ ಮುಖಂಡರಾದ ಕುಮಾರ ಬಂಗಾರಪ್ಪ ಮತ್ತು ಬಿ.ಸಿ.ಪಾಟೀಲ್, ನಿಗಮ ಮಂಡಳಿಗಳಲ್ಲಿ ಪರಾಜಿತ ಅಭ್ಯರ್ಥಿಗಳಿಗೆ ತಕ್ಕ ಹುದ್ದೆ ನೀಡುವಂತೆ ಮನವಿ ಮಾಡಿದರು. 
 
2018ರ ಚುನಾವಣೆಗೆ ಸಿದ್ದರಾಗಬೇಕಾಗಿದೆ ಪಕ್ಷದ ಪರಾಜಿತ ಅಭ್ಯರ್ಥಿಗಳಿಗೆ ನಿಗಮ ಮಂಡಳಿಗಳಲ್ಲಿ ಅಥವಾ ಪಕ್ಷದ ವಿವಿಧ ಹುದ್ದೆಗಳಲ್ಲಿ ಉತ್ತಮ ಸ್ಥಾನ ನೀಡಿದಲ್ಲಿ ಮುಂಬರುವ ಚುನಾವಣೆಯ ವೇಳೆಯಲ್ಲಿ ಸಹಕಾರಿಯಾಗುತ್ತದೆ ಎಂದು ಕೋರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕದ ಜನ ಕತ್ತುಕೊಯ್ದುಕೊಂಡು ರಕ್ಷ ಕೊಡಬೇಕಷ್ಟೆ; ಸಚಿವ ರಮೇಶ್ ಕುಮಾರ್