Select Your Language

Notifications

webdunia
webdunia
webdunia
webdunia

ಬಿಎಂಟಿಸಿ ವಾಹನಗಳಲ್ಲಿ ನವೆಂಬರ್ ತಿಂಗಳಲ್ಲಿ ಟಿಕೆಟ್ ಪಡೆಯದ 2580 ಜನರಿಗೆ 4.05 ಲಕ್ಷ ರೂ. ದಂಡ

ಬಿಎಂಟಿಸಿ ವಾಹನಗಳಲ್ಲಿ ನವೆಂಬರ್ ತಿಂಗಳಲ್ಲಿ ಟಿಕೆಟ್ ಪಡೆಯದ 2580 ಜನರಿಗೆ 4.05 ಲಕ್ಷ ರೂ. ದಂಡ
bangalore , ಶುಕ್ರವಾರ, 10 ಡಿಸೆಂಬರ್ 2021 (20:48 IST)
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ವಾಹನಗಳಲ್ಲಿ ನವೆಂಬರ್ ತಿಂಗಳಲ್ಲಿ ಟಿಕೆಟ್ ಪಡೆಯದ 2580 ಜನರಿಗೆ 4.05 ಲಕ್ಷ ರೂ. ದಂಡ ಹಾಕಲಾಗಿದೆ.
ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಬಿಎಂಟಿಸಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಪ್ರಯಾಣಿಕರಿಗೆ ದಂಡ ಹಾಕಲಾಗಿದ್ದು, ಸಂಸ್ಥೆಯ ನಿರ್ವಾಹಕರ ವಿರುದ್ಧ 1642 ಪ್ರಕರಣಗಳನ್ನು ದಾಖಲಿಸಲಾಗಿದೆ.
ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 214 ಪುರುಷ ಪ್ರಯಾಣಿಕರಿಂದ ಒಟ್ಟು  21,400 ರೂ.ನ್ನು ದಂಡ ಹಾಕಲಾಗಿದೆ. ಒಟ್ಟಾರೆಯಾಗಿ ನವಂಬರ್ ತಿಂಗಳಲ್ಲಿ 2794 ಪ್ರಯಾಣಿಕರಿಂದ ಒಟ್ಟು ರೂ 4,26,734 ದಂಡವನ್ನು ವಸೂಲಿ ಮಾಡಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭೂ ಸ್ವಾಧೀನ ಪರಿಹಾರಕ್ಕಾಗಿ ಅಧಿಕಾರಿಯೊಬ್ಬ 25 ಸಾವಿರ ರೂ. ಬೇಡಿಕೆ