Webdunia - Bharat's app for daily news and videos

Install App

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಸಿಎಂ ಗೆ ಕಗ್ಗಂಟಾಗುತ್ತಾ?

Webdunia
ಬುಧವಾರ, 12 ಫೆಬ್ರವರಿ 2020 (10:18 IST)
ಬೆಂಗಳೂರು : ಖಾತೆ ಹಂಚಿಕೆ ಬಳಿಕ ಇದೀಗ ಸಿಎಂ ಬಿಎಸ್ ವೈ ಗೆ ಜಿಲ್ಲಾ ಉಸ್ತುವಾರಿ ನೇಮಕ ತಲೆನೋವು ಶುರುವಾಗಿದ್ದು,  ಸಿಎಂ ಗೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡುವುದು ಒಂದು ಸವಾಲಾಗಿದೆ.

ಹಿರಿಯ ಸಚಿವರಿಗೆ ಯಾವುದೇ ರೀತಿಯ ಬೇಸರವಾಗದಂತೆ ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ನೀಡುವುದು ಹಾಗೂ  ಬೆಂಗಳೂರು, ಬಳ್ಳಾರಿ, ಹಾವೇರಿ, ಬೆಳಗಾವಿ ಜಿಲ್ಲೆಗಳಗೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡುವುದು ಸಿಎಂ  ಬಿಎಸ್ ವೈ ಗೆ ದೊಡ್ಡ ಸವಾಲಾಗಿದೆ.

 

ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಕ್ಕೆ ಹಲವರಿಂದ ಪೈಪೋಟಿ ನಡೆಯುತ್ತಿದ್ದು, ಬೆಂಗಳೂರು ನಗರ ಜಿಲ್ಲೆಗೆ ಅಶೋಕ್, ಅಶ್ವತ್ಥ್ ನಾರಾಯಣ, ನೂತನ ಸಚಿವರಾದ ಗೋಪಾಲಯ್ಯ, ಭೈರತಿ ಬಸವರಾಜ್ , ಎಸ್ ಟಿ ಸೋಮಶೇಖರ್ ಮಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

 

ಬಳ್ಳಾರಿ ಜಿಲ್ಲಾ ಉಸ್ತುವಾರಿಯನ್ನು ಆನಂದ್ ಸಿಂಗ್ ಗೆ ನೀಡಿದ್ರೆ  ಶ್ರೀರಾಮುಲು ಬೆಂಬಲಿಗರ ಅಸಮಾಧಾನಕ್ಕೆ ಕಾರಣವಾಗಬಹುದು. ಹಾವೇರಿ ಜಿಲ್ಲಾ ಉಸ್ತುವಾರಿಗಾಗಿ ಬಿ.ಸಿ.ಪಾಟೀಲ್ ಬೇಡಿಕೆ ಇಟ್ಟಿದ್ದು, ಸದ್ಯ ಬಸವರಾಜ್ ಬೊಮ್ಮಾಯಿಗೆ ಉಸ್ತುವಾರಿ ನೀಡಲಾಗಿದೆ. ಹೀಗಾಗಿ ಹಾವೇರಿ ಜಿಲ್ಲಾ ಉಸ್ತುವಾರಿ ಸಹ ಕಗ್ಗಂಟಾಗಬಹುದು. ಹೀಗೆ ಕೆಲ ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರ ನೇಮಕ ಸಿಎಂ ಗೆ ಕಗ್ಗಂಟಾಗಲಿದೆ ಎನ್ನಲಾಗಿದೆ.-

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments