Publish Date: Thu, 03 May 2018 (14:53 IST)
Updated Date: Thu, 03 May 2018 (14:54 IST)
ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಕಣ ರಂಗೇರುತ್ತಿದ್ದು ಇಂದು ದಾವಣಗೆರೆಯಲ್ಲಿ ಹಾಲಿ ಸಿಎಂಗಳಿಬ್ಬರು ಅಬ್ಬರದ ಪ್ರಚಾರ ನಡೆಸಲಿದ್ದಾರೆ.
ಕರ್ನಾಟಕ ಸಿಎಂ ಸಿದ್ದರಾಮಯ್ಯ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ದಾವಣಗೆರೆಗೆ ಆಗಮಿಸಲಿದ್ದು, ಒಬ್ಬರಿಗೊಬ್ಬರು ವಾಗ್ದಾಳಿ ನಡೆಸುವ ಸಾಧ್ಯತೆ ಇದೆ.ಇನ್ನೂ ಸಿಎಂ ಸಿದ್ದರಾಮಯ್ಯ ದಾವಣಗೆರೆ ಜಿಲ್ಲೆಯ ವಿವಿಧ ವಿಧಾನ ಸಭಾ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದು, ಬೆಳಿಗ್ಗೆ 11ಗಂಟೆಗೆ ದಾವಣಗೆರೆಯ ಹರಿಹರ ಮತ್ತು ಹರಪನಹಳ್ಳಿ, ಮಾಯಕೊಂಡ , ಚೆನ್ನಗಿರಿ ವಿಧಾನ ಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ ರಾಜ್ಯ ನಾಯಕರು, ಜಿಲ್ಲಾ ಉಸ್ತುವಾರಿ ಸಚಿವರು ಸಾಥ್ ನೀಡಲಿದ್ದಾರೆ. ಇನ್ನೊಂದೆಡೆ ಫೈರ್ ಬ್ರ್ಯಾಂಡ್ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮೊದಲ ಭಾರಿಗೆ ದಾವಣಗೆರೆಗೆ ಆಗಮಿಸಲಿದ್ದು ಸಂಜೆ 5ಗಂಟೆಗೆ ಹೊನ್ನಾಳಿಯಲ್ಲಿ ಬಿಜೆಪಿ ಅಭ್ಯರ್ಥಿ ಎಂಪಿ ರೇಣುಕಾಚಾರ್ಯ ಪರ ಬಿರುಸಿನ ಪ್ರಚಾರ ನಡೆಸಲಿದ್ದು ಹೊನ್ನಾಳಿಯ ಹಿರೇ ಕಲ್ಮಠದಲ್ಲಿ ವಾಸ್ತವ್ಯ ಹೂಡಲಿದ್ದಾರೆ.