Select Your Language

Notifications

webdunia
webdunia
webdunia
webdunia

ಚುನಾವಣೆಯಲ್ಲಿ ಸರಕಾರದ ವೈಫಲ್ಯಗಳ ಬಹಿರಂಗ: ದೇವೇಗೌಡ

ಚುನಾವಣೆ
ಬೆಂಗಳೂರು , ಬುಧವಾರ, 26 ಅಕ್ಟೋಬರ್ 2016 (19:17 IST)
ಮುಂಬರುವ ವಿಧಾನಸಭೆ ಚುನಾವಣೆ ಸಮಯದಲ್ಲಿ ಸರಕಾರದ ಹುಳುಕುಗಳನ್ನು ರಾಜ್ಯದ ಜನತೆ ಮುಂದಿಡುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. 
 
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದ್ದೇನೆ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಏನು ಮಾತನಾಡಬೇಕು ಎನ್ನುವುದು ನನಗೆ ಅರಿವಿದೆ ಎಂದು ಹೇಳಿದರು.
 
ನಿಗಮ ಮಂಡಳಿಗಳಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ನೇಮಕ ಮಾಡಲು ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತು ಏನು ಮಾತನಾಡುವುದಿಲ್ಲ ಎಂದು ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. 
 
ರಾಜ್ಯದಲ್ಲಿ ಸ್ಥಳೀಯ ಪಕ್ಷವಾಗಿರುವ ಜೆಡಿಎಸ್ ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವುದು ಖಚಿತ ಎಂದು ಮಾಹಿತಿ ನೀಡಿದರು. 
 
ಕಿಕ್ ಬ್ಯಾಕ್ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಕ್ಲೀನ್ ಚಿಟ್ ನೀಡಿದೆ. ಈ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡರು ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವರ ಎದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರೈತ