Webdunia - Bharat's app for daily news and videos

Install App

94 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಲ್ಲೇ ಮೊದಲ ಭಾರೀ ಭರ್ತಿಯಾದ ಕೆಆರ್‌ಎಸ್‌, ಬಾಗಿನ ಅರ್ಪಣೆ

Sampriya
ಸೋಮವಾರ, 30 ಜೂನ್ 2025 (16:02 IST)
Photo Credit X
ಮೈಸೂರು: ಕೆಆರ್‌ಎಸ್ ಜಲಾಶಯ 94 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಭರ್ತಿಯಾಗಿದೆ. ಈ ಹಿನ್ನೆಲೆ ಕೃಷ್ಣರಾಜ ಸಾಗರ ಜಲಾಶಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿನ ಸಚಿವ ಎನ್‌ ಚಲುವರಾಯಸ್ವಾಮಿ ಬಾಗಿನ ಅರ್ಪಿಸಿದರು. 

ಜೀವನದಿ ಕಾವೇರಿ ಮಾತೆಗೆ ಎಲ್ಲಾ ನಾಯಕರು ಬಾಗಿನ ಸಮರ್ಪಿಸಿದರು. ಇದೇ ಮೊದಲ ಬಾರಿಗೆ ಜೂನ್ ತಿಂಗಳ ಅವಯಲ್ಲೇ ಕೆಆರ್‌ಎಸ್ ಜಲಾಶಯ ಭರ್ತಿಯಾಗಿದೆ.

ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ 124.80 ಸಾಮರ್ಥ್ಯ ಹೊಂದಿರೋ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಇವತ್ತು ಕಾವೇರಿ ಮಾತೆಗೆ ಬಾಗಿನ ಅರ್ಪಿಸುವ ಮೂಲಕ ಜೂನ್‌ನಲ್ಲಿ ಬಾಗಿನ ಅರ್ಪಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ.

ಜೂನ್ 28 ರಂದೇ ಜಲಾಶಯ ಭರ್ತಿಯಾಗಿದ್ದು, ವೇದಬ್ರಹ್ಮ ಡಾ. ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ಇವತ್ತು ಧಾರ್ಮಿಕ ನಿವಿಧಾನಗಳು ನೆರವೇರಿದವು. ಬಾಗಿನ ಸಮರ್ಪಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯವನ್ನು ಬಣ್ಣ ಬಣ್ಣದ ಹೂವುಗಳಿಂದ ಅಲಂಕರಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

94 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಲ್ಲೇ ಮೊದಲ ಭಾರೀ ಭರ್ತಿಯಾದ ಕೆಆರ್‌ಎಸ್‌, ಬಾಗಿನ ಅರ್ಪಣೆ

ಹೈಕಮಾಂಡ್ ನೋಡಿಕೊಳ್ಳುತ್ತೆ ಎಂದ ಮಲ್ಲಿಕಾರ್ಜುನ ಖರ್ಗೆ: ಫುಲ್ ಟ್ರೋಲ್

ವಿಜಯೇಂದ್ರಗೆ 10 ನಿಮಿಷ ಅಮಿತ್ ಶಾ ಬೈದಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್

ಆಂಧ್ರಪ್ರದೇಶದ ಶ್ರೀಶೈಲಂ ದೇವಸ್ಥಾನದ ಪ್ರಸಾದದಲ್ಲಿ ಜಿರಳೆ ಪತ್ತೆ: ಆರೋಪ ತಳ್ಳಿಹಾಕಿದ ಆಡಳಿತ ಅಧಿಕಾರಿ

70 ಲಕ್ಷ ಕಾರು, ಚಿನ್ನ ಕೊಟ್ಟರೂ ಗಂಡನ ಮನೆಯವರ ಕಾಟ ತಪ್ಪಲಿಲ್ಲ: ನವವಿವಾಹಿತೆ ಆತ್ಮಹತ್ಯೆ

ಮುಂದಿನ ಸುದ್ದಿ
Show comments