ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಜಾರಿ ಮಾಡುತ್ತಿಲ್ಲ ಎಂಬ ತೆಲಂಗಾಣ ಮುಖ್ಯಮಂತ್ರಿ ಹೇಳಿಕೆ ರಾಜಕೀಯ ಪ್ರೇರಿತ ಹಾಗೂ ಸತ್ಯಕ್ಕೆ ದೂರವಾದ ಆರೋಪ. ಕಾಂಗ್ರೆಸ್ ನೀಡಿರುವ 5 ಗ್ಯಾರಂಟಿ ಐದು ವರ್ಷಗಳವರೆಗೂ ಅನುಷ್ಠಾನಗೊಳ್ಳಲಿವೆ. ರಾಜ್ಯದ ಜನತೆಯನ್ನು ಮೋಸ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಮ್ ಸಿದ್ದರಾಮಯ್ಯ ತೆಲಂಗಾಣದ ಕಾಂಗ್ರೆಸ್ ಪಕ್ಷದ ಪ್ರಚಾರದಲ್ಲಿ ಮಾತನಾಡಿದ್ದಾರೆ.