Select Your Language

Notifications

webdunia
webdunia
webdunia
webdunia

ನರಗುಂದದಲ್ಲಿ ಮಾಡು ಇಲ್ಲವೇ ಮಡಿ ರೈತರ ಹೋರಾಟ

webdunia
ನರಗುಂದ , ಭಾನುವಾರ, 16 ಜುಲೈ 2017 (11:51 IST)
ಮಹಾದಾಯಿ ಹೋರಾಟಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮಾಡು ಇಲ್ಲವೇ ಮಡಿ ಹೋರಾಟಕ್ಕೆ ರೈತರು ಮುಂದಾಗಿದ್ದಾರೆ. 
 
ಪಟ್ಟಣದಲ್ಲಿ ರೈತ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಸಾವಿರಾರು ಸಂಖ್ಯೆಯಲ್ಲಿ ರೈತರು ಪಾಲ್ಗೊಂಡಿದ್ದಾರೆ. ಎರಡು ವರ್ಷ ನಿರಂತರವಾಗಿ ಹೋರಾಟ ಮಾಡಿದ್ದರೂ ನ್ಯಾಯ ಸಿಗದಿದ್ದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಸಮಾವೇಶದಲ್ಲಿ ಸಾವಿರಾರು ಸಂಖ್ಯೆಯಲ್ಲಿ ರೈತರು 20ಕ್ಕೂ ಹೆಚ್ಚು ಮಠಾಧೀಶರು ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಪುಟ್ಟಣ್ಣಯ್ಯ ಮಾಹಿತಿ ನೀಡಿದ್ದಾರೆ.
 
ರೈತರು ಕುಡಿಯುವ ನೀರಿಗೂ ಪರದಾಡುತ್ತಿದ್ದರೂ ರಾಜ್ಯ ಮತ್ತು ಕೇಂದ್ರ ಸರಕಾರಗಳು ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸುತ್ತಿಲ್ಲ. ಆದ್ದರಿಂದ ಮಾಡು ಇಲ್ಲವೇ ಮಡಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಜಮ್ಮು-ಕಾಶ್ಮೀರದಲ್ಲಿ ಘರ್ಷಣೆ: ಬಂದ್ ಆಚರಣೆ