Select Your Language

Notifications

webdunia
webdunia
webdunia
webdunia

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದೆಲ್ಲೆಡೆ ನೀತಿ ಸಂಹಿತೆ ಜಾರಿ

In the background of the state assembly elections
bangalore , ಗುರುವಾರ, 27 ಏಪ್ರಿಲ್ 2023 (19:50 IST)
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದೆಲ್ಲೆಡೆ ನೀತಿ ಸಂಹಿತೆ ಜಾರಿಯಿರುವುದರಿಂದ ಗಣ್ಯರ ಕಾರುಗಳ ಮುಂಗಾವಲು ಹಾಗೂ ಬೆಂಗಾವಲು ವಾಹನಗಳಿಗೆ ಟಾಪ್ ಲೈಟ್ ಹಾಗೂ ಸೈರನ್ ಬಳಸದಂತೆ ತಮ್ಮ ಸಿಬ್ಬಂದಿಗೆ ನಗರ ಸಿಎಆರ್ ಕೇಂದ್ರ ವಿಭಾಗದ ಡಿಸಿಪಿ ಅರುಣಾಂಗ್ಷು ಗಿರಿ ಆದೇಶ ಹೊರಡಿಸಿದ್ದಾರೆ.ಚುನಾವಣೆ ಕಾರಣದಿಂದಾಗಿ ನೀತಿ ಸಂಹಿತೆ ಜಾರಿಯಲ್ಲಿದೆ. ಈ ವೇಳೆ ಓಡಾಡುವ  ವಿವಿಧ ಗಣ್ಯರ ಮುಂಗಾವಲು ಹಾಗೂ ಬೆಂಗಾವಲು ವಾಹನಗಳಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸುವವರು ಟಾಪ್ ಲೈಟ್ ಹಾಗೂ ಸೈರನ್ ಶಬ್ಧ ಬಳಸಕೂಡದು. ಚುನಾವಣೆ ನಿಯಮದನ್ವಯ ಸೈರನ್ ಬಳಸದಂತೆ ಸೂಚಿಸಿದೆ. ಚುನಾವಣೆ ಮುಗಿಯುವವರೆಗೂ ಚಾಲಕ ಅಥವಾ ಅಧಿಕಾರಿಗಳಾಗಲಿ ಸೈರನ್ ಬಳಸುವಂತಿಲ್ಲ.  ಒಂದು ವೇಳೆ ಚುನಾವಣಾ ನಿಯಮ ಉಲ್ಲಂಘಿಸಿದರೆ ಅಂತಹ ಅಧಿಕಾರಿ ಅಥವಾ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್ ನಾಯಕರು ಕಾಂಗ್ರೆಸ್ ಸೇರ್ಪಡೆ