Select Your Language

Notifications

webdunia
webdunia
webdunia
webdunia

ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರದಲ್ಲಿ ಲೂಟಿ ಹೊಡದವನೇ ಜಾಣ: ಆರ್‌ ಅಶೋಕ್ ಕಿಡಿ

Waqf Board Controvercy, Chief Minister Siddaramaiah,Opposition Leader R Ashok,

Sampriya

ಬೆಂಗಳೂರು , ಗುರುವಾರ, 7 ನವೆಂಬರ್ 2024 (16:14 IST)
Photo Courtesy X
ಬೆಂಗಳೂರು: "ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ" ಎನ್ನುವಂತೆ ಈ "ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರದಲ್ಲಿ ಲೂಟಿ ಹೊಡದವನೇ ಜಾಣ" ಎನ್ನುವ ನಿರ್ಧಾರಕ್ಕೆ ಬಂದಂತಿದೆ ವಕ್ಫ್ ಮಂಡಳಿ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಹೇಳಿದರು.

ಚಿಕ್ಕಬಳ್ಳಾಪುರದಲ್ಲಿ ಸರ್‌ ಎಂ.ವಿಶ್ವೇಶ್ವರಯ್ಯ ಅವರು ವ್ಯಾಸಂಗ ಮಾಡಿದ್ದ ಸರ್ಕಾರಿ ಶಾಲೆಯನ್ನೂ ವಕ್ಫ್‌ ಹೆಸರಿಗೆ ಪರಭಾರೆ ಮಾಡಿರುವ ಬಗ್ಗೆ ಅವರು ಆಕ್ರೋಶ ಹೊರಹಾಕಿದ್ದಾರೆ.

ಈ ಸಂಬಂಧ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. "ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ" ಎನ್ನುವಂತೆ ಈ "ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರದಲ್ಲಿ ಲೂಟಿ ಹೊಡದವನೇ ಜಾಣ" ಎನ್ನುವ ನಿರ್ಧಾರಕ್ಕೆ ಬಂದಂತಿದೆ ವಕ್ಫ್ ಮಂಡಳಿ.

ಔರಂಗಜೇಬ್, ಟಿಪ್ಪು ಸುಲ್ತಾನ್ ಅಪರಾವತಾರದಂತಿರುವ ಈ ಕಾಂಗ್ರೆಸ್ ಸರ್ಕಾರವನ್ನ ಹೀಗೆ ಬಿಟ್ಟರೆ ವಿಶ್ವೇಶ್ವರಯ್ಯನವರು ಓದಿದ ಶಾಲೆಯನ್ನು ವಕ್ಫ್ ಆಸ್ತಿ ಎನ್ನುತ್ತೆ, ವಿಶ್ವೇಶ್ವರಯ್ಯನವರು ಕಟ್ಟಿದ ಕನ್ನಂಬಾಡಿ ಕಟ್ಟೆಯೂ ವಕ್ಫ್ ಆಸ್ತಿ ಆಗುತ್ತದೆ. ಅಣ್ಣ ಬಸವಣ್ಣನವರ ಅನುಭವ ಮಂಟಪವೂ ವಕ್ಫ್ ಆಸ್ತಿ ಆಗುತ್ತೆ, ಕೆಂಪೇಗೌಡರು ಕಟ್ಟಿದ ಬೆಂಗಳೂರು ವಕ್ಫ್ ಆಸ್ತಿ ಆಗುತ್ತೆ.

ಸ್ವಾಮಿ ಸಿದ್ದರಾಮಯ್ಯ ನವರೇ, ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನ ಈ ಕೂಡಲೇ ಸಂಪುಟದಿಂದ ವಜಾ ಮಾಡಿ. ಇಲ್ಲವಾದರೆ ಇಡೀ ಕರ್ನಾಟಕ ವಕ್ಫ್ ಆಸ್ತಿ ಆಗುವ ದಿನ ದೂರವಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಗೆ ಜನ ಶಾಂತಿಯುತವಾಗಿರುವುದು ಬೇಕಾಗಿಲ್ಲ: ಡಿಸಿಎಂ ಶಿವಕುಮಾರ್‌