Select Your Language

Notifications

webdunia
webdunia
webdunia
webdunia

ಬಾಣಂತಿಯರ ಸರಣಿ ಸಾವು ಪ್ರಕರಣ, ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಎಂದ ಸಿಎಂ

Bellary Maternal Case, Chief Minister Siddaramaiah, Bellary Disctrict Hospital,

Sampriya

ಬೆಂಗಳೂರು , ಶುಕ್ರವಾರ, 6 ಡಿಸೆಂಬರ್ 2024 (17:55 IST)
ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣ 5ಕ್ಕೆ ಏರಿದ್ದು, ಇದೀಗ ಈ ಸಂಬಂಧ ಯಾವುದೇ ಮುಲಾಜಿಲ್ಲದೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಇಂದು ನಡೆದ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಬಾಣಂತಿಯರ ಸಾವು ಪ್ರಕರಣದ ಬಗ್ಗೆಯೂ ಚರ್ಚೆ ನಡೆದಿದೆ. ಸಚಿವ ಸಂಪುಟ ಸಭೆಯಲ್ಲಿ ಬಾಣಂತಿಯರ ಸಾವಿನ ಬಗ್ಗೆ ಗಂಭೀರ ಚರ್ಚೆ ನಡೆದಿದ್ದು, ನನ್ನ ಸರ್ಕಾರದಲ್ಲಿ ಅಂಥದ್ದಕ್ಕೆ ಜಾಗವಿಲ್ಲ ಎಂದು ಸಿದ್ದರಾಮಯ್ಯ ಖಡಕ್ ಸಂದೇಶ ರವಾನಿಸಿದ್ದಾರೆ.

ನಂತರ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದ್ದಾರೆ.

ಬಾಣಂತಿಯರ ಸಾವಿನ ಸಂಖ್ಯೆ ಬಳ್ಳಾರಿ ಜಿಲ್ಲೆಯಲ್ಲಿ ಐದಕ್ಕೆ ಏರಿದೆ. ಇದೇ ವೇಳೆ ಸಿದ್ದರಾಮಯ್ಯ
ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ವಿಸ್ತೃತ ಚರ್ಚೆ ನಡೆದಿದೆ.

ಇದೇ ವೇಳೆ ಸಿದ್ದರಾಮಯ್ಯ, ಬಾಣಂತಿಯರ ಸಾವಿನ ಬಗ್ಗೆ ಮೊದಲು ಪರಿಶೀಲನೆ ನಡೆಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊಲೆಗಡುಕ ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೊಂದು ಬಾಣಂತಿ ಸಾವು: ಸಿಎಂ ಮೇಲೆ ಆರ್‌ ಅಶೋಕ್‌ ಗರಂ