Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಎನ್ನುತ್ತಾರೆ: ಆರ್‌ ಅಶೋಕ್‌ ಲೇವಡಿ

Congress Government, Minister Eshwar Khandre, Opposition Leader R Ashok,

Sampriya

ಬೆಂಗಳೂರು , ಶುಕ್ರವಾರ, 15 ನವೆಂಬರ್ 2024 (15:06 IST)
ಬೆಂಗಳೂರು: ಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯಿತು ಎಂಬ ಗಾದೆ ಮಾತಿನಂತೆ ಈ ಎಡಬಿಡಂಗಿ ಕಾಂಗ್ರೆಸ್ ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಎನ್ನುತ್ತಾರೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಕಾಲೆಳೆದಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು,  ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿ ಸಂಚಾರ ನಿಷೇಧ ತೆರವು ಮಾಡುವ ಬಗ್ಗೆ ಇತ್ತೀಚೆಗಷ್ಟೇ ಒಬ್ಬೊಬ್ಬ ಸಚಿವರು ಒಂದೊಂದು ಹೇಳಿಕೆ ಕೊಟ್ಟು, ನಂತರ ಮುಖ್ಯಮಂತ್ರಿಗಳು ಉಲ್ಟಾ ಹೊಡೆದ ಮೇಲೆ ಇಡೀ ಸರ್ಕಾರವೇ ನಗೆಪಾಟಲಿಗೀಡಾಗಿತ್ತು.

ಈಗ ಅರಣ್ಯ ಸಚಿವ ಈಶ್ವರ್ ಖಂಡ್ರೆ
 ಅವರು ನೀರಿನ ಬಿಲ್ ಮೇಲೆ ಹಸಿರು ಸೆಸ್ ಹಾಕುವ ಪ್ರಸ್ತಾಪ ಮಾಡುತ್ತಿದ್ದಂತೆ ಅಂತಹ ಪ್ರಸ್ತಾವನೆಯೇ
ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಅವರು ಉಲ್ಟಾ ಹೊಡೆದಿದ್ದಾರೆ.

ಒಟ್ಟಿನಲ್ಲಿ ಈ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಎಡವಟ್ಟೆ, ಎಲ್ಲವೂ ಅಯೋಮಯವೇ ಎಂದು ಲೇವಡಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕದಲ್ಲಿ ಬರೋಬ್ಬರಿ 6 ಲಕ್ಷ ಎಕರೆ ವಕ್ಫ್ ಬೋರ್ಡ್ ಗೆ ಮಾಡಲು ಹೊರಟಿದ್ದಾರೆ