ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

Sampriya
ಶನಿವಾರ, 6 ಡಿಸೆಂಬರ್ 2025 (14:37 IST)
ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಮತ್ತೆ ಸಂಕಷ್ಟವೊಂದು ಎದುರಾಗಿದೆ.  ದೆಹಲಿ ಪೊಲೀಸರು ಶಿವಕುಮಾರ್‌ ಅವರಿಗೆ ಹಣಕಾಸು ವಿನಿಮಯದ ಮಾಹಿತಿಗಳನ್ನು ಕೇಳಿ ನೋಟಿಸ್‌ ಜಾರಿ ಮಾಡಿದ್ದಾರೆ. 

ಶಿವಕುಮಾರ್‌ ಅವರಿಗೆ ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ ನ.29ರಂದು ಈ ನೋಟಿಸ್‌ ಕಳಿಸಿದೆ. ಅದರಲ್ಲಿ, ಡಿ.19ರ ಒಳಗೆ ಹಾಜರಾಗಿ ವೈಯಕ್ತಿಕ ಹಿನ್ನೆಲೆ, ಕಾಂಗ್ರೆಸ್‌ ಪಕ್ಷದೊಂದಿಗಿನ ಒಡನಾಟ, ಅವರು ಅಥವಾ ಅವರಿಗೆ ಸೇರಿದ ಸಂಸ್ಥೆಗಳಿಂದ ಯಂಗ್‌ ಇಂಡಿಯಾಗೆ ವರ್ಗಾವಣೆಯಾದ ಹಣದ ಬಗ್ಗೆ ಮಾಹಿತಿ ನೀಡಲು ಸೂಚಿಸಲಾಗಿದೆ.

ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದ ಆದಾಯ ತೆರಿಗೆ ದಾಖಲೆ, ಹಣಕಾಸು ಹೇಳಿಕೆ ಮತ್ತು ದೇಣಿಗೆಯ ಪ್ರಮಾಣಪತ್ರಗಳನ್ನೂ ಸಲ್ಲಿಸುವಂತೆ ಸೂಚಿಸಿದೆ. 

ಪೊಲೀಸರ ಈ ನೋಟಿಸ್‌ಗೆ ಕಾಂಗ್ರೆಸ್‌ ಆಕ್ಷೇಪ ವ್ಯಕ್ತೊಡಿಸಿದೆ. ಬಿಜೆಪಿಗೆ ಸಹಕಾರ ತೋರದಿದ್ದಕ್ಕೆ ಶಿವಕುಮಾರ್‌ರನ್ನು ಟಾರ್ಗೆಟ್‌ ಮಾಡಲಾಗುತ್ತಿದೆ. ಪಕ್ಷದ ನಾಯಕರ ಪೈಕಿ ಅವರನ್ನೇ ಹೆಚ್ಚು ಕಿರುಕಿಳ ನೀಡಲಾಗುತ್ತಿದೆ. ಆದರೆ ಅವರು ಯಾವುದಕ್ಕೂ ಮಣಿಯುವುದಿಲ್ಲ ಎಂದಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments