Select Your Language

Notifications

webdunia
webdunia
webdunia
webdunia

ವಯನಾಡು ದುರಂತದಿಂದ ಎಚ್ಚೆತ್ತ ರಾಜ್ಯ ಸರ್ಕಾರದಿಂದ ಪಶ್ಚಿಮ ಘಟ್ಟ ಉಳಿವಿಗೆ ದಿಟ್ಟ ಕ್ರಮ

ವಯನಾಡು ದುರಂತದಿಂದ ಎಚ್ಚೆತ್ತ ರಾಜ್ಯ ಸರ್ಕಾರದಿಂದ ಪಶ್ಚಿಮ ಘಟ್ಟ ಉಳಿವಿಗೆ ದಿಟ್ಟ ಕ್ರಮ

Sampriya

ಬೆಂಗಳೂರು , ಶುಕ್ರವಾರ, 2 ಆಗಸ್ಟ್ 2024 (18:27 IST)
Photo Courtesy X
ಬೆಂಗಳೂರು: ಕೇರಳದ ವಯನಾಡಿನಲ್ಲಿ ನಡೆದ ಭೀಕರ ಭೂಕುಸಿತದ ಬೆನ್ನಲ್ಲೇ ಎಚ್ಚೆತ್ತ ಕರ್ನಾಟಕ ಸರ್ಕಾರ ಪಶ್ಚಿಮ ಘಟ್ಟದಲ್ಲಿ 2015ರ ನಂತರದ ಅರಣ್ಯ ಒತ್ತುವರಿ ತೆರವಿಗೆ ಮತ್ತು ಅನಧಿಕೃತ ಹೋಮ್‌ ಸ್ಟೇ, ರೆಸಾರ್ಟ್ ವಿರುದ್ಧ ಕ್ರಮಕ್ಕೆ ಅರಣ್ಯ ಸಚಿವರ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

ಅದರಂತೆ ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015 ರಿಂದ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಇನ್ನೂ ಪಶ್ಚಿಮ ಘಟ್ಟದಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ, ರೆಸಾರ್ಟ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.  ಈ ಸಂಬಂಧ ತಿಂಗಳೊಳಗೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತದಲ್ಲಿ ವರದಿ ಸಲ್ಲಿಸಬೇಕೆಂದು ಸೂಚಿಸಿದ್ದಾರೆ.

ಈಚೆಗೆ ಭಾರೀ ಮಳೆಗೆ ರಾಜ್ಯದ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11ಮಂದಿ ಸಾವನ್ನಪ್ಪಿದ್ದರು. ಇನ್ನೂ ನೆರೆ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ200ಮಂದಿ ಸಾವನ್ನಪ್ಪಿದ್ದು 200ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಈ ದುರಂತಗಳ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಈ ಕ್ರಮ ಮಾಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಜಯೇಂದ್ರರ ಎಲ್ಲ ಹಗರಣ ಬಿಚ್ಚಿಡುತ್ತೇನೆ: ಗುಡುಗಿದ ಡಿಕೆ ಶಿವಕುಮಾರ್‌