Select Your Language

Notifications

webdunia
webdunia
webdunia
webdunia

ರಾಜ್ಯಕ್ಕೆ ಅನ್ಯಾಯವಾದಾಗ ಬೊಮ್ಮಾಯಿ ಯಾವ ಬಿಲದಲ್ಲಿದ್ದರು: ದಿನೇಶ್ ಗುಂಡೂರಾವ್ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಬೊಮ್ಮಾಯಿ ಯಾವ ಬಿಲದಲ್ಲಿದ್ದರು: ದಿನೇಶ್ ಗುಂಡೂರಾವ್ ವ್ಯಂಗ್ಯ

Sampriya

ಬೆಂಗಳೂರು , ಸೋಮವಾರ, 29 ಜುಲೈ 2024 (10:45 IST)
Photo Courtesy X
ಬೆಂಗಳೂರು: ಸಿದ್ದರಾಮಯ್ಯ ಅವರು ನೀತಿ ಆಯೋಗದ ಸಭೆಗೆ ಹಾಜರಾಗದೆ ಅನ್ಯಾಯ ಎಸಗಿದ್ದಾರೆ ಎನ್ನುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯ ಆಗುವ ಯಾವ ಬಿಲದಲ್ಲಿದ್ದರು ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಕ್ಕೆ ಬೇಕಾದ ಯೋಜನೆಗಳ ಕುರಿತು ಚರ್ಚಿಸುವ ನೀತಿ ಆಯೋಗದ ಸಭೆಗೆ ಗೈರು ಹಾಜರಾಗುವ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಮಾಜಿ ಮುಖ್ಯ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಈ ಸಂಬಂಧ ದಿನೇಶ್ ಗುಂಡೂರಾವ್ ಅವರು ಆಕ್ರೋಶ ಹೊರಹಾಕಿ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು‌ ನೀತಿ ಆಯೋಗದ ಸಭೆಗೆ ಹಾಜರಾಗದೆ ರಾಜ್ಯಕ್ಕೆ ಅನ್ಯಾಯ ಎಸಗಿದ್ದಾರೆ ಎಂದು ಮಾಜಿ ಸಿಎಂ ಬೊಮ್ಮಾಯಿ ಅವರು ಹೇಳಿದ್ದಾರೆ.

ಈಗ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಮಾತಾಡುವ ಬೊಮ್ಮಾಯಿಯವರು ಬಜೆಟ್‌ನಲ್ಲಿ ಕರ್ನಾಟಕದ ಪ್ರಸ್ತಾಪವೇ ಮಾಡದಿದ್ದಾಗ ಯಾವ ಬಿಲದಲ್ಲಿ ಅಡಗಿಕೊಂಡಿದ್ದರು‌.

19 ಜನ ಸಂಸದ 5 ಜನ ಕೇಂದ್ರ ಸಚಿವರೂ ಇದ್ದರೂ ಬಜೆಟ್‌ನಲ್ಲಿ ರಾಜ್ಯಕ್ಕಾದ ಅನ್ಯಾಯದ ಬಗ್ಗೆ ಬಿಜೆಪಿ ಜೆಡಿಎಸ್ ನಾಯಕರ ನಾಲಗೆಯೇ ಹೊರಳಲಿಲ್ಲ.

ಮೋದಿ ಸರ್ಕಾರ ಕರ್ನಾಟಕಕ್ಕೆ ನಿರಂತರ ಅನ್ಯಾಯ ಎಸಗುತ್ತಿದೆ. ಅದರ ಬಗ್ಗೆ ಮಾತಾಡುವ ತಾಕತ್ತಿಲ್ಲದೆ, ನೀತಿ ಸಭೆಗೆ ಹಾಜರಾಗದಿರುವುದರಿಂದ ಅನ್ಯಾಯ ಆಯಿತು ಎಂದು ಬಡಬಡಿಸುವುದು ಹಾಸ್ಯಾಸ್ಪದ.

Share this Story:

Follow Webdunia kannada

ಮುಂದಿನ ಸುದ್ದಿ

ಅಧಿಕಾರಿ ಹಣೆಗೆ ಕುಂಕುಮವಿಟ್ಟ ಸುನೀಲ್ ಬೋಸ್: ವೈವಾಹಿಕ ಜೀವನದ ಬಗ್ಗೆ ಮುಚ್ಚಿಟ್ರ ಸಂಸದರು