Daily Horoscope

Select Your Language

Notifications

webdunia
webdunia
webdunia
webdunia

ಇನಾಮ್‌ದಾರ್‌ ಸಕ್ಕರೆ ಕಾರ್ಖಾನೆ ದುರಂತ, ಸಾವಿನ ಸಂಖ್ಯೆ ಮತ್ತೇ ಏರಿಕೆ

Belgavi Sugar Factor Tragedy
ಬೆಳಗಾವಿ: ಇಲ್ಲಿನ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಬಳಿಯ ಇನಾಮ್​ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ನಾಲ್ವರು ಕಾರ್ಮಿಕರು ಇಂದು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಈ ಸಂಬಂದ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮೃತ ದುರ್ದೈವಿಗಳನ್ನು ಅಕ್ಷಯ ತೋಪಡೆ, ದೀಪಕ್ ಮುನವಳ್ಳಿ, ಸುದರ್ಶನ ಬನೋಶಿ, ಬೈಲಹೊಂಗಲ ತಾಲೂಕಿನ ಅರವಳ್ಳಿ ನಿವಾಸಿ ಮಂಜುನಾಥ ಮಡಿವಾಳಪ್ಪ ಕಾಜಗಾರ್, ಗೋಕಾಕ್ ತಾಲೂಕಿನ ಗೊಡಚಿನಮಲ್ಕಿ ಗ್ರಾಮದ ನಿವಾಸಿ ಭರತೇಶ ಸಾರವಾಡಿ, ತೇರದಾಳ ಅಥಣಿ ಪಟ್ಟಣದ ನಿವಾಸಿ ಮಂಜುನಾಥ್ ತೇರದಾಳ, ಬಾಗಲಕೋಟ ಜಿಲ್ಲೆಯ ಮರೆಗುದ್ದಿ ಗ್ರಾಮದ ಗುರುಪಾದಪ್ಪ ತಮ್ಮನ್ನವರ್​​ ಎಂದು ಗುರುತಿಸಲಾಗಿದೆ. 

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಬಳಿಯ ಇನಾಮ್​ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಬಾಯ್ಲರ್ ಸ್ಫೋಟಗೊಂಡು ಎಂಟು ಜನರಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದರು. 

ಈ ಕಾರ್ಖಾನೆ ವಿಕ್ರಮ ಇನಾಮದಾರ್​​ ಎಂಬುವವರಿಗೆ ಸೇರಿದೆ. ನಿನ್ನೆ ಕಾರ್ಖಾನೆ ವಾಲ್ ದುರಸ್ತಿ ಮಾಡುವಾಗ ವಾಲ್ ಸ್ಫೋಟಗೊಂಡು ಕುದಿಯುವ ಕಬ್ಬಿನ ಹಾಲು ಕಾರ್ಮಿಕರ ಮೈಮೇಲೆ ಬಿದ್ದಿತ್ತು. ಗಂಭೀರವಾಗಿ ಗಾಯಗೊಂಡವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಿಸದೆ ಒಬ್ಬೊಬ್ಬರೇ ಕಾರ್ಮಿಕರು ಸಾವನ್ನಪ್ಪಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಕುರ್ಚಿ ಗುದ್ದಾಟದ ನಡುವೆ ಡಿಕೆ ಶಿವಕುಮಾರ್ ದೊಡ್ಡ ಜವಾಬ್ದಾರಿ ವಹಿಸಿದ ಕಾಂಗ್ರೆಸ್