ಬೆಂಗಳೂರು,ಬೆಳಗಾವಿ ಸೇರಿ 3 ವಂದೇ ಭಾರತ್ ರೈಲುಗಳ ಉದ್ಘಾಟನೆ

Sampriya
ಭಾನುವಾರ, 10 ಆಗಸ್ಟ್ 2025 (14:27 IST)
Photo Credit X
ಬೆಂಗಳೂರು: ಬೆಂಗಳೂರು ನಗರದ ಜನತೆಯ ಬಹುನಿರೀಕ್ಷಿತ ಯೋಜನೆಯಾದ ಬೆಂಗಳೂರು ಯೆಲ್ಲೋ ಮೆಟ್ರೋ ರೈಲು ಸಂಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಇಂದು ಚಾಲನೆ ನೀಡಲಿದ್ದಾರೆ. ಇದರಿಂದಾಗಿ ಬೆಂಗಳೂರಿನಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. 

ಬೆಂಗಳೂರಿಗೆ ಇಂದು ಆಗಮಿಸಿದ ಗೌರವಾನ್ವಿತ ಪ್ರಧಾನಿ ಮೋದಿ ಜೀ ಅವರು ಕೆಎಸ್‍ಆರ್ ರೈಲ್ವೇ ನಿಲ್ದಾಣಕ್ಕೆ ತೆರಳಿದರು. ಅಲ್ಲಿ ಅವರು ಬೆಂಗಳೂರು - ಬೆಳಗಾವಿ ಒಂದೇ ಭಾರತ್ ರೈಲಿಗೆ ಚಾಲನೆ ನೀಡಿದರು. ಅಮೃತ್‍ಸರ್ - ಶ್ರೀ ಮಾತಾ ವೈಷ್ಣೋದೇವಿ ಮತ್ತು ನಾಗಪುರ್-ಪುಣೆ ವಂದೇ ಭಾರತ್ ರೈಲುಗಳಿಗೆ ಅವರು ಆನ್‍ಲೈನ್ ಮೂಲಕ ಚಾಲನೆ ನೀಡಿದರು.

ಕೆಎಸ್‍ಆರ್ ಒಂದೇ ಭಾರತ್ ರೈಲು ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾನ್ಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್, ವಿ.ಸೋಮಣ್ಣ, ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮತ್ತು ಸಂಸದ ಪಿ.ಸಿ. ಮೋಹನ್, ಪ್ರಮುಖರು ಉಪಸ್ಥಿತರಿದ್ದರು

ಮಾನ್ಯ ಪ್ರಧಾನಿಗಳಾದ ಮೋದಿ ಜೀ ಅವರು ಇಂದು ಬೆಂಗಳೂರು ಯಲ್ಲೋ ಮೆಟ್ರೋ ರೈಲು ಸಂಚಾರವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಅಲ್ಲದೆ 15,611 ಕೋಟಿ ರೂ ವೆಚ್ಚದ ಬೆಂಗಳೂರು ಮೆಟ್ರೋ ಹಂತ-3 ರ ಶಂಕುಸ್ಥಾಪನೆಯನ್ನೂ ನೆರವೇರಿಸಲಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments